ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಿಗೆ ಹಾಗೂ ರೈತರ ಪಂಪ್ಸೆಟ್ಗಳಿಗೆ ಸತತ 8 ಗಂಟೆ ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆರೋಪಿಸಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ‘ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ರೈತರು ಬೆಳೆಗಳಿಗೆ ನೀರು ಹಾಯಿಸಲು ಪರದಾಡುತ್ತಿದ್ದಾರೆ. ರಾತ್ರಿ ವೇಳೆಯೂ ತ್ರಿ–ಫೇಸ್ ವಿದ್ಯುತ್ ಸರಬರಾಜು ಕಡಿತಗೊಳ್ಳುತ್ತಿದ್ದು ರೈತರು ರಾತ್ರಿಯಿಡೀ ನಿದ್ದೆಗೆಟ್ಟು ವಿದ್ಯುತ್ಗಾಗಿ ಕಾಯುವ ಪರಿಸ್ಥಿತಿ ಎದುರಾಗಿದೆ’ ಎಂದರು.

‘ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುತ್ತೇವೆ ಎಂದು ಹೇಳುತ್ತಾ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ ಇದುವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾತನಾಡುತ್ತಿಲ್ಲ’ ಎಂದು ದೂರಿದರು.

‘ಬೆಂಬಲ ಬೆಲೆಗೆ (ಎಂಎಸ್ಪಿ) ನೀತಿ ರೂಪಿಸಿ ಶಾಸನಬದ್ಧಗೊಳಿಸಬೇಕು. ಇಲ್ಲದಿದ್ದರೆ ರೈತರಿಗೆ ಉಳಿಗಾಲವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಬ್ಬರಿಗೆ ಘೋಷಣೆ ಮಾಡಿದ್ದ ₹1,250 ಸಹಾಯ ಧನ ಒಂದು ಸಾವಿರ ರೈತರಿಗೂ ತಲುಪಿಲ್ಲ. ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿದ್ದು, ರಾಜ್ಯ ಸರ್ಕಾರ ರೈತರ ಪರವಾಗಿ ನಿಂತುಕೊಳ್ಳಬೇಕು’ ಎಂದು ಆಗ್ರಹಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ಕಾರ್ಯದರ್ಶಿಗಳಾದ ಹುಸ್ಕೂರು ಸುರೇಶ, ವೀರಭದ್ರಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.