ಬೆಂಗಳೂರು: ‘ಬೇರೆ ರಾಜ್ಯದಿಂದ ಅಕ್ಕಿ ತರುವುದನ್ನು ಕೈಬಿಡಬೇಕು. ನಮ್ಮ ರೈತರಿಂದಲೇ ಅಕ್ಕಿ ಖರೀದಿಸಬೇಕು. ಆಗ ರಾಜ್ಯದ ರೈತರು ಆರ್ಥಿಕವಾಗಿ ಬೆಳೆಯಲು ಸಾಧ್ಯ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಗಾಂಧಿಭವನದಲ್ಲಿ ಬುಧವಾರ ಆಯೋಜಿಸಿದ್ದ ರೈತ ಸಂಘದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂದು ರಾಜ್ಯ ಸರ್ಕಾರವು ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಲು ಮುಂದಾಗಿರುವುದು ಸರಿಯಲ್ಲ. ಅಕ್ಕಿ, ರಾಗಿ, ಜೋಳ, ಸಿರಿಧಾನ್ಯಗಳನ್ನು ನಮ್ಮ ರೈತರಿಂದಲೇ ಖರೀದಿ ಮಾಡಬೇಕು. ಆಗ ನಮ್ಮ ಹಣ, ರಾಜ್ಯದಲ್ಲಿಯೇ ಬಳಕೆಯಾಗುತ್ತದೆ ಎಂದು ಹೇಳಿದರು.

ರೈತರಿಗೆ ಬೇಕಾಗುವ ಕೃಷಿ ಸಂಬಂಧಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು. ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಬೇಕು. ಕೃಷಿ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಡೆಗಟ್ಟಬೇಕು. ಬಜೆಟ್ನಲ್ಲಿ ಶೇ 50ರಷ್ಟು ಅನುದಾನವನ್ನು ರೈತರಿಗಾಗಿ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಈ ಎಲ್ಲ ವಿಚಾರಗಳ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ವಿಚಾರ ಸಂಕಿರಣದಲ್ಲಿ ನಿರ್ಧರಿಸಲಾಯಿತು.

ಕೃಷಿ ಅರ್ಥಶಾಸ್ತ್ರಜ್ಞ ಜಯರಾಮ್, ಆರ್ಥಿಕ ವಿಮರ್ಶಕ ಸಿ.ಎ. ರುದ್ರಮೂರ್ತಿ, ಜನಪದ ವಿದ್ವಾಂಸ ಗೋವಿಂದರಾಜು ಮುಂತಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.