ಬೆಂಗಳೂರು: ಹುಬ್ಬಳ್ಳಿ ಟೈಗರ್ಸ್ ಮತ್ತು ಬಳ್ಳಾರಿ ಟಸ್ಕರ್ಸ್ ಮಧ್ಯೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆ ನಡೆದ ಕೆಪಿಎಲ್ ಪಂದ್ಯದ ಸಂದರ್ಭದಲ್ಲಿ ಬೆಟ್ಟಿಂಗ್ನಲ್ಲಿ ತೊಡಗಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹರೀಶ್ ಕುಮಾರ್ ಜೈನ್, ಪ್ರವೀಣ್ ಮತ್ತು ವಿಕಾಸ್ ಜೈನ್ ಬಂಧಿತರು. ಆರೋಪಿಗಳಿಂದ ₹ 10.36 ಲಕ್ಷ ಮತ್ತು ಮೂರು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಜೆ.ಪಿ. ನಗರ ಠಾಣಾ ವ್ಯಾಪ್ತಿಯ ಸಾಯಿ ಮೆಡ್ಲೈಫ್ ಮೆಡಿಕಲ್ ಸ್ಟೋರ್ ಸಮೀಪ ವೆಬ್ಸೈಟ್ ಮೂಲಕ ಈ ಕ್ರಿಕೆಟ್ ತಂಡಗಳ ಸೋಲು ಗೆಲುವಿನ ಬಗ್ಗೆ ಹಣ ಕಟ್ಟಿಸಿಕೊಂಡು ಆರೋಪಿಗಳು ಜೂಜಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದರು.

ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು, ನಗದು ಮತ್ತು ಮೊಬೈಲ್ ಜಪ್ತಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.