ಬೆಂಗಳೂರು: ಸ್ಮಾರ್ಟ್ಸಿಟಿ ಯೋಜನೆಯಡಿ ಕೆ.ಆರ್. ಮಾರುಕಟ್ಟೆ ಜಂಕ್ಷನ್ ಅಭಿವೃದ್ಧಿಪಡಿಸಲು ಶೀಘ್ರವೇ ಟೆಂಡರ್ ಕರೆಯುವಂತೆ ಮೇಯರ್ ಎಂ. ಗೌತಮ್ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಮಾರ್ಟ್ಸಿಟಿ ಲಿಮಿಟೆಡ್ ವತಿಯಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ನಗರ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಸ್ಮಾರ್ಟ್ ಸಿಟಿ ಯೋಜನೆಯಡಿ ಟೆಂಡರ್ ಶ್ಯೂರ್ ಮಾದರಿಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಮುಗಿಸಬೇಕು’ ಎಂದು ತಿಳಿಸಿದರು.

‘36 ರಸ್ತೆಗಳ ಕಾಮಗಾರಿ ನಿರ್ವಹಿಸುವಾಗ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು. ಸಮರ್ಪಕವಾಗಿ ಬ್ಯಾರಿಕೇಡ್ ಅಳವಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು’ ಎಂದು ತಿಳಿಸಿದರು.

ಬೆಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ‘ಕೆ.ಆರ್.ಮಾರುಕಟ್ಟೆ ಜಂಕ್ಷನ್ ಅಭಿವೃದ್ಧಿಪಡಿಸಲು ಸ್ಥಳ ಸಮೀಕ್ಷೆ ನಡೆಸಿನೀಲನಕ್ಷೆ ಸಿದ್ಧಪಡಿಸಲಾಗಿದೆ. ಬಿಎಂಟಿಸಿ ಬಸ್ಗಳ ನಿಲುಗಡೆ ಸ್ಥಳ, ಆಟೊ ನಿಲ್ದಾಣ, ಪಾದಚಾರಿ ಮಾರ್ಗ ಹಾಗೂ ಖಾಲಿ ಜಾಗವನ್ನೂ ಅಭಿವೃದ್ಧಿಪಡಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಸಂಸದ ಪಿ.ಸಿ.ಮೋಹನ್, ಶಾಸಕರಾದದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್, ರಿಜ್ವಾನ್ ಅರ್ಷದ್, ಸ್ಮಾರ್ಟ್ಸಿಟಿ ಯೋಜನೆ ಮುಖ್ಯ ಎಂಜಿನಿಯರ್ ಶ್ರೀನಿವಾಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.