ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸಲು ಕೆನೆಭರಿತ ಹಾಲು ವಿತರಿಸಲು 2013ರಲ್ಲಿ ತಮ್ಮ ಸರ್ಕಾರ ಜಾರಿಗೊಳಿಸಿದ್ದ ‘ಕ್ಷೀರ ಭಾಗ್ಯ’ ಯೋಜನೆ ದಶಕ ಪೂರೈಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘2013ರ ಆಗಸ್ಟ್ 1ರಂದು ನಮ್ಮ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿತ್ತು. ಈ ಯೋಜನೆಯು ಮಂಗಳವಾರಕ್ಕೆ ಹತ್ತು ವರ್ಷಗಳನ್ನು ಪೂರೈಸಿದೆ. ನಿತ್ಯ ಒಂದು ಕೋಟಿಗೂ ಹೆಚ್ಚು ಮಕ್ಕಳಿಗೆ ಹಾಲು ನೀಡುವ ಮೂಲಕ ಅವರ ಶೈಕ್ಷಣಿಕ ಸಾಧನೆಗೆ ನೆರವಾದ ಸಂತೃಪ್ತಿ ನನ್ನದು’ ಎಂದಿದ್ದಾರೆ.

ವಿಶ್ವ ಡೇರಿ ಫೌಂಡೇಷನ್‌ನಿಂದ ನೀಡಲಾಗುವ ‘ಅಂತರರಾಷ್ಟ್ರೀಯ ಅತ್ಯುತ್ತಮ ಯೋಜನೆ ಪ್ರಶಸ್ತಿ–2022’ಕ್ಕೆ ಈ ಯೋಜನೆ ಭಾಜನವಾಗಿದೆ. ಈ ಯೋಜನೆ ಜಾರಿಗೊಳಿಸಿರುವುದಕ್ಕೆ ಹೆಮ್ಮೆ ಇದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.