ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ಬೈಕ್ ಸವಾರನನ್ನು ಆರ್ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅರುಣ್ ಕುಮಾರ್ (30) ಬಂಧಿತ ಆರೋಪಿ.

ಗೊರಗುಂಟೆಪಾಳ್ಯದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ವೆಂಕಟರೆಡ್ಡಿ ಎಂಬುವರ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ತುಮಕೂರಿನಿಂದ ಬಸ್ ನಗರಕ್ಕೆ ಬರುತ್ತಿತ್ತು. ಇದೇ ಮಾರ್ಗದಲ್ಲಿ ಆರೋಪಿ ಅರುಣ್ ಕುಮಾರ್ ಕೂಡ ಬೈಕ್ನಲ್ಲಿ ಬರುತ್ತಿದ್ದ. ಆಗ ರಸ್ತೆಯಲ್ಲಿ ಜಾಗ ಬಿಡುವ ವಿಚಾರಕ್ಕೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಚಾಲಕನ ಮೇಲೆ ಅರುಣ್ ಕುಮಾರ್ ಹಲ್ಲೆ ನಡೆಸಿದ್ದಾನೆ. ಬಳಿಕ, ವೆಂಕಟರೆಡ್ಡಿ ಸ್ಥಳೀಯರ ನೆರವಿನಿಂದ ಆರೋಪಿಯನ್ನು ಹಿಡಿದು ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.