ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟವು ಇದೇ 15ಕ್ಕೆ ದಾವಣಗೆರೆಯ ತ್ರಿಶೂಲ್ ಕಲಾ ಭವನದಲ್ಲಿ ನೌಕರರ ಸಮ್ಮೇಳನ ಹಮ್ಮಿಕೊಂಡಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಆರ್., ‘ಸಾರಿಗೆ ಸಂಸ್ಥೆ ಗಳ ಅಭಿವೃದ್ಧಿ ಹಾಗೂ ನೌಕರರ ಹಿತ ಚಿಂತನೆಗೆ ಬಗ್ಗೆ ಸಮ್ಮೇಳನದಲ್ಲಿ ಚರ್ಚೆ ನಡೆಸಲಾಗುತ್ತದೆ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರಿಗೆ ಸರ್ಕಾರಿ ನೌಕರರಂತೆ ವೇತನ ನೀಡಬೇಕು’ ಎಂದು ಆಗ್ರಹಿಸಿದರು.

‘ಮುಷ್ಕರದ ಸಮಯದಲ್ಲಿ ವಜಾ ಗೊಂಡ ನೌಕರರನ್ನು ಪುನಃ ನೇಮಿಸಿ ಕೊಳ್ಳಬೇಕು. ಈ ಬಗ್ಗೆ ಸಮ್ಮೇಳನದಲ್ಲಿ ಆಗ್ರಹಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.