ಬೆಂಗಳೂರು: ಮುಷ್ಕರದ ಅವಧಿಯಲ್ಲಿ ವಜಾ ಮಾಡಿದ ಸಾರಿಗೆ ಸಂಸ್ಥೆಗಳ ನೌಕರರನ್ನು ಮರಳಿ ಕೆಲಸಕ್ಕೆ ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು ಸಂಯೋಜಿತ) ನಗರದಲ್ಲಿಸೋಮವಾರ ಪ್ರತಿಭಟನೆ ನಡೆಸಿತು.

ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸಿದ ಫೆಡರೇಷನ್ ಪದಾಧಿಕಾರಿಗಳು ಮತ್ತು ನೌಕರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

‘ಸೇವೆಯಿಂದ ಕೈಬಿಟ್ಟಿರುವ ತರಬೇತಿ ಅವಧಿಯ ಎಲ್ಲಾ ನೌಕರರನ್ನು ಪುನರ್ ನೇಮಕ ಮಾಡಿಕೊಳ್ಳಬೇಕು. ವಿಭಾಗದಿಂದ ವಿಭಾಗಕ್ಕೆ ವರ್ಗಾವಣೆ ಮಾಡಿರುವ ನೌಕರರನ್ನು ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ಆಡಳಿತಾತ್ಮಕ ವರ್ಗಾವಣೆ ಆಧಾರದಲ್ಲಿ ವಾಪಸ್ ತರಬೇಕು’ ಎಂದು ಆಗ್ರಹಿಸಿದರು.

‘ಕೆಲ ನೌಕರರ ವಿರುದ್ಧ ಹೊರಡಿಸಿರುವ ಅಮಾನತು ಆದೇಶ ವಾಪಸ್ ಪಡೆಯಬೇಕು. ಮುಷ್ಕರದಲ್ಲಿ ಭಾಗಿಯಾಗಿದ್ದ ಕಾರಣಕ್ಕೆ ಹಲವರಿಗೆ ಅಪರಾಧ ಪತ್ರ ನೀಡಲಾಗುತ್ತಿದೆ. ಅದನ್ನು ವಾಪಸ್ ಪಡೆದು ಶಿಸ್ತು ಕ್ರಮದ ಪ್ರಕ್ರಿಯೆ ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.

2020 ಜನವರಿಯಿಂದ ಬಾಕಿ ಇರುವ ವೇತನ ಮಾತುಕತೆಯನ್ನು ಕೂಡಲೇ ಆರಂಭಿಸಬೇಕು ಎಂದು ಅವರು ಮನವಿ ಮಾಡಿದರು.

ಫೆಡರೇಷನ್ ಅಧ್ಯಕ್ಷ ಎಚ್.ಡಿ. ರೇವಪ್ಪ, ಉಪಾಧ್ಯಕ್ಷ ಕೆ. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಮಂಜುನಾಥ್, ಉಪಾಧ್ಯಕ್ಷ ಚಂದ್ರಪ್ಪ, ಜಂಟಿ ಕಾರ್ಯದರ್ಶಿ ಆರ್.ವೇಣುಗೋಪಾಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.