ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ‘ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್’ ವಿಷಯ ಆಧಾರಿತ ಫಲಪುಷ್ಪ ಪ್ರದರ್ಶನ’ಕ್ಕೆ ಭಾನುವಾರ 68 ಸಾವಿರ ಮಂದಿ ಭೇಟಿ ನೀಡಿದ್ದು, ₹42.32 ಲಕ್ಷ ಸಂಗ್ರಹವಾಗಿದೆ. ಶನಿವಾರಕ್ಕೆ ಹೋಲಿಸಿದರೆ ಉದ್ಯಾನಕ್ಕೆ ಭೇಟಿ ನೀಡಿದವರ ಸಂಖ್ಯೆ ಹೆಚ್ಚಿತ್ತು.

ಶಾಲೆ–ಕಾಲೇಜು, ಕಚೇರಿಗಳಿಗೆ ರಜೆ ಇದ್ದಿದ್ದರಿಂದ ಬೆಳಿಗ್ಗೆಯಿಂದಲೇ ಸಾರ್ವಜನಿಕರು ಲಾಲ್‌ಬಾಗ್‌ಗೆ ಗುಂಪು–ಗುಂಪಾಗಿ ಆಗಮಿಸಿದರು. ಬಂಡೆ, ಕೆರೆ ಏರಿ, ಬೋನ್ಸಾಯ್, ತರಕಾರಿ ಉದ್ಯಾನ, ಮಾರಾಟ ಮಳಿಗೆಗಳ ಬಳಿ ಕಿಕ್ಕಿರಿದ ಜನಸಂದಣಿ ಇತ್ತು. ಗಾಜಿನ ಮನೆಯಲ್ಲಿ ಜನದಟ್ಟಣೆ ಉಂಟಾಗಿ, ಸಾಲುಗಳನ್ನು ನಿಯಂತ್ರಿಸಲು ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಹರಸಾಹಸಪಟ್ಟರು.

ಟಿಕೆಟ್ ಪಡೆಯಲು ಸಹ ಜನರು ಸಾಲಿನಲ್ಲಿ ಸಾಕಷ್ಟು ಹೊತ್ತು ನಿಲ್ಲಬೇಕಾಯಿತು. ಇದರಿಂದ ಮಕ್ಕಳು ಹಾಗೂ ವೃದ್ಧರು ಸಮಸ್ಯೆ ಎದುರಿಸಿದರು. ಲಾಲ್‌ಬಾಗ್ ಮುಖ್ಯ ಗೇಟಿನ ರಸ್ತೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ, ಬೀದಿ ವ್ಯಾಪಾರಿಗಳ ಹಾವಳಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು. ಉದ್ಯಾನದ ನಾಲ್ಕು ಪ್ರವೇಶ ದ್ವಾರಗಳ ಪಾದಚಾರಿ ಮಾರ್ಗದಲ್ಲಿ ಕಿರು ಮಾರುಕಟ್ಟೆಗಳೇ ಸೃಷ್ಟಿಯಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.