ಬೆಂಗಳೂರು: ಅಂಧ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಪಡೆಯುವ ಹಕ್ಕು ತಿಳಿದುಕೊಳ್ಳಲು ಸಮಗ್ರ ಕಾರ್ಯವಿಧಾನ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಯೋಜನೆ ಅನುಷ್ಠಾನ ಸಂಬಂಧ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಕೆಲವೇ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಎಲ್ಲರಿಗೂ ಮಾಹಿತಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿತು.

‘2014ರ ಜುಲೈ 3ರಂದು ಸರ್ಕಾರ ಹೊರಡಿಸಿರುವ ಆದೇಶದ ಬಗ್ಗೆ ಸಾಕಷ್ಟು ಅರ್ಹ ವಿದ್ಯಾರ್ಥಿಗಳಿಗೆ ಮಾಹಿತಿ ಇಲ್ಲ. 10ನೇ ತರಗತಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಈ ಸಂಬಂಧ ಮಾಹಿತಿ ನೀಡುವುದು ಕ್ಷೇತ್ರಾಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿ’ ಎಂದು ಪೀಠ ತಿಳಿಸಿದೆ.

‘2014ರಲ್ಲಿ ಯೋಜನೆ ಪ್ರಾರಂಭಿಸಿದಾಗ ₹4ಕೋಟಿ ಅನುದಾನ ನೀಡಲಾಗಿತ್ತು. 2015–16ರಲ್ಲಿ ₹3.5 ಕೋಟಿ, 2019–20ರಲ್ಲಿ ₹2.4 ಕೋಟಿಗೆ ಇಳಿಸಲಾಗಿದೆ. ಆದರೂ, ಅನುದಾನದ ಲಾಭ ವಿದ್ಯಾರ್ಥಿಗಳಿಗೆ ತಲುಪುತ್ತಿಲ್ಲ’ ಎಂದು ವಕೀಲ ಎಸ್.ಉಮಾಪತಿ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.