ಬೆಂಗಳೂರು: ‘ವಕೀಲರ ಬಗ್ಗೆ ಹಗುರವಾಗಿ ಮಾತನಾಡಿದ ಸಂಸದ ಪ್ರತಾಪ್‌ಸಿಂಹರಿಗೆ ಧಿಕ್ಕಾರ. ಕೂಡಲೇ ಅವರು ವಕೀಲ ಸಮುದಾಯದವರ ಕ್ಷಮೆಯಾಚಿಸಬೇಕು’ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವಕೀಲರ ಸಂಘ ಆಗ್ರಹಿಸಿದೆ.

‘ರಾಜಕೀಯ ದುರುದ್ದೇಶದಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಟೀಕಿಸಲು ಹೋಗಿ ವಕೀಲ ಸಮುದಾಯವನ್ನೇ ಟೀಕಿಸಿರುವುದು ಖಂಡನೀಯ’ ಎಂದರು

‘ಅದೂ ‘ಬಿ.ಎ, ಎಲ್.ಎಲ್.ಬಿ ಮಾಡಿಕೊಂಡು ಯಾವುದಾದರೂ ತಾಲ್ಲೂಕಿನ ನ್ಯಾಯಾಲಯದಲ್ಲಿ ವಕೀಲಿಕೆ ಮಾಡಿಕೊಂಡಿದ್ದ ಸಿದ್ದರಾಮಯ್ಯರವರಿಗೆ ದೇಶದ ಅರ್ಥಿಕತೆ ಬಗ್ಗೆ ಹೇಗೆ ಗೊತ್ತಾಗಬೇಕು?’ ಎಂದು ವಾಗ್ದಾಳಿ ಮಾಡಿರುವುದು ಖಂಡನೀಯ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಸುರೇಶ.ಎಂ.ಲಾತೂರ ಆಕ್ರೋಶ ವ್ಯಕ್ತಪಡಿಸಿದರು.

‘ಪ್ರಜಾಪ್ರಭುತ್ವ ಸರ್ಕಾರದಲ್ಲಿ ವಕೀಲರ ಪಾತ್ರದ ಬಗ್ಗೆ ಗೊತ್ತಿಲ್ಲದ ಪ್ರತಾಪ್‌ಸಿಂಹ ಲೋಕಸಭಾ ಸದಸ್ಯರಾಗಲು ಅನರ್ಹರು. ದೇಶದ ಇತಿಹಾಸ ಅರ್ಥ ಮಾಡಿಕೊಳ್ಳದ ಅಜ್ಞಾನಿಗಳು’ ಎಂದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಪ್ರತಿನಿಧಿಸುವ ಹಲವು ಶಾಸಕರು ಮತ್ತು ಸಂಸದರು ವಕೀಲರಾಗಿದ್ದಾರೆ. ಆದ್ದರಿಂದ ಕೂಡಲೇ ಪ್ರತಾಪ್‌ಸಿಂಹ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.