ಬೆಂಗಳೂರು: ವಿಧಾನ ಪರಿಷತ್ನ ಪದವೀಧರರು ಮತ್ತು ಶಿಕ್ಷಕರ ಆರು ಕ್ಷೇತ್ರಗಳ ಮತ ಎಣಿಕೆ ಗುರುವಾರ ನಡೆಯಲಿದೆ. ಮೈಸೂರು, ಬೆಂಗಳೂರು ಮತ್ತು ಕಲಬುರಗಿಯಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳ ಮತ ಎಣಿಕೆ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆಯಲಿದೆ. ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ. ಈಶಾನ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಕಲಬುರಗಿ ನಗರದ ಗುಲ್ಬರ್ಗ ವಿಶ್ವವಿದ್ಯಾಲಯದ ಹೇಮರೆಡ್ಡಿ ಮಲ್ಲಮ್ಮ ಕಟ್ಟಡದಲ್ಲಿ ನಡೆಯಲಿದೆ.

ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಎಲ್ಲ ಕೇಂದ್ರಗಳಲ್ಲೂ ಮತ ಎಣಿಕೆ ಆರಂಭವಾಗಲಿದೆ. ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಬೇಕಿರುವುದರಿಂದ ಫಲಿತಾಂಶ ಹೊರಬೀಳುವುದು ತಡವಾಗುವ ಸಾಧ್ಯತೆ ಇದೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಯಾರೊಬ್ಬರೂ ಗೆಲುವು ಸಾಧಿಸದಿದ್ದರೆ, ನಂತರದ ಪ್ರಾಶಸ್ತ್ಯದ ಮತಗಳ ಎಣಿಕೆ ನಡೆಸಬೇಕಾಗುತ್ತದೆ. ಹೀಗಾಗಿ ಫಲಿತಾಂಶ ಪ್ರಕಟವಾಗುವುದು ತಡವಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.