ಬೆಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ನೀಡುವ 2022–23ನೇ ಸಾಲಿನ ‘ಆದಿಕವಿ ಪುರಸ್ಕಾರ’ಕ್ಕೆ ಗುಲ್ಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಸಂಗಮೇಶ ಸವದತ್ತಿಮಠ ಹಾಗೂ ‘ವಾಗ್ದೇವಿ ಪ್ರಶಸ್ತಿ’ಗೆ ಲೇಖಕ ಸತ್ಯನಾರಾಯಣ ಕಾರ್ತಿಕ್ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಗಳು ತಲಾ ₹ 1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿವೆ. ಸಂಗಮೇಶ ಸವದತ್ತಿಮಠ ಅವರ 136 ಗ್ರಂಥಗಳು ಪ್ರಕಟವಾಗಿವೆ. 500 ಉಪನ್ಯಾಸಗಳನ್ನು ಅವರು ನೀಡಿದ್ದಾರೆ. ರೂಪರಶ್ಮಿ ಪ್ರಕಾಶನ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ, ಭಾಷಾ ವಿಜ್ಞಾನಕ್ಕೆ ಸಂಬಂಧಿಸಿದ ಅನೇಕ ಕೃತಿಗಳನ್ನು ಪ್ರಕಟಿಸುತ್ತಾ ಬಂದಿದ್ದಾರೆ. ಸತ್ಯನಾರಾಯಣ ಕಾರ್ತಿಕ್ ಅವರು 4 ಸ್ವತಂತ್ರ ಪುಸ್ತಕಗಳು ಹಾಗೂ 3 ಸಂಪಾದಿತ ಕೃತಿಗಳನ್ನು ಪ್ರಕಟಿಸಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ ಎಂದು ಸಂಸ್ಥೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ ನರೂರು ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಾಲ್ಮೀಕಿ ಮಹರ್ಷಿ ಜಯಂತಿ ಪ್ರಯುಕ್ತ ಇದೇ 28ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಗಿರಿನಗರದಲ್ಲಿರುವ ಅಕ್ಷರಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕದ ಗೌರವಾಧ್ಯಕ್ಷರಾದ ಪ್ರೊ. ಪ್ರೇಮಶೇಖರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್. ಕುಮಾರ್, ವಿಸ್ತಾರ ವಾಹಿನಿಯ ಪ್ರಧಾನ ಸಂಪಾದಕ ಹರಿಪ್ರಕಾಶ ಕೋಣೆಮನೆ, ಜಿಕೆ ಗ್ರೂಪ್ಸ್ ಮಾಲೀಕ ಜಯರಾಮ್ ಹಾಗೂ ವಾಗ್ದೇವಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪನಾಧ್ಯಕ್ಷ ಕೆ. ಹರೀಶ್ ಭಾಗವಹಿಸುತ್ತಾರೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.