ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕ ಸ್ಥಾನ ಗಳಿಸದಿದ್ದರೆ ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.

ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಮಂಗಳವಾರ ನಡೆದ ಬಿಜೆಪಿ-ಜೆಡಿಎಸ್ ಜಂಟಿ ಕೋರ್ ಕಮಿಟಿ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬೇಕಾದರೆ ವರುಣ ಕ್ಷೇತ್ರದಲ್ಲಿ 60,000 ಮತಗಳ ಮುನ್ನಡೆ ಕೊಡಿ ಎಂದು ಸಿದ್ದರಾಮಯ್ಯ ಸೋಮವಾರ ಮನವಿ ಮಾಡಿದ್ದಾರೆ. ಇದರ ಹಿಂದೆ ಅಧಿಕಾರ ಕಳೆದುಕೊಳ್ಳುವ ಭಯವಿದೆ’ ಎಂದರು.

‘ಸಿದ್ದರಾಮಯ್ಯ ಅವರು ಅವರ ಮನಸ್ಸಿನಲ್ಲಿ ಇರುವುದನ್ನು ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ, ನಾಲ್ವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಒಂದು ವರ್ಷದಿಂದ ಚರ್ಚೆ ನಡೆಯುತ್ತಿದೆ. ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುತ್ತಾರೆ ಎಂದು ಅವರ ಪಕ್ಷದವರೇ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲಿ ಬಹುಮತ ಬಂದರೆ ನಾನು ಉಳಿಯುತ್ತೇನೆ, ಇಲ್ಲವಾದರೆ ಕೆಳಕ್ಕಿಳಿಸುತ್ತಾರೆ ಎಂಬ ಸಂದೇಶವನ್ನು ಮುಖ್ಯಮಂತ್ರಿಯವರು ತಮ್ಮ ಭಾಷಣದಲ್ಲಿ ನೀಡಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.