ಬೆಂಗಳೂರು: ‘ಮಸೀದಿ, ಚರ್ಚ್, ದೇವಸ್ಥಾನ ಹಾಗೂ ಇತರೆಡೆಗಳಲ್ಲಿ ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಕಡ್ಡಾಯ. 15 ದಿನದೊಳಗೆ, ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸದ್ಯ ಬಳಕೆ ಮಾಡುತ್ತಿರುವ ಧ್ವನಿವರ್ಧಕಗಳಿಗೂ ಹಾಗೂ ಹೊಸ ಧ್ವನಿವರ್ಧಕಗಳಿಗೂ ಅನುಮತಿ ಪಡೆಯಬೇಕು’ ಎಂದರು.

‘ಧ್ವನಿವರ್ಧಕ ಬಳಕೆ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಹಾಗೂ ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಎಲ್ಲರೂ ಪಾಲಿಸಬೇಕು. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಸಲು ಅವಕಾಶವಿರುವುದಿಲ್ಲ. ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದೂ ಅವರು ಹೇಳಿದರು.

ಎಸಿಪಿ ಕಚೇರಿಗೆ ಅರ್ಜಿ ಸಲ್ಲಿಸಿ: ‘ಧ್ವನಿವರ್ಧಕ ಅರ್ಜಿಗಳ ಪರಿಶೀಲನೆ ಹಾಗೂ ಅನುಮತಿ ನೀಡುವ ಅಧಿಕಾರವನ್ನು ಸಹಾಯಕ ಪೊಲೀಸ್ ಕಮಿಷನರ್‌ಗಳಿಗೆ (ಎಸಿಪಿ) ನೀಡಲಾಗಿದೆ. ಮಸೀದಿ, ಚರ್ಚ್, ದೇವಸ್ಥಾನ ಹಾಗೂ ಇತರರು, ಎಸಿಪಿಗೆ ಅರ್ಜಿ ಸಲ್ಲಿಸಬೇಕು’ ಎಂದೂ ಕಮಲ್ ಪಂತ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.