ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಒಂಟಿಯಾಗಿ ವಾಸವಿದ್ದ ಕಮಲಾ (82) ಎಂಬುವವರನ್ನು ದುಷ್ಕರ್ಮಿಗಳು ಶನಿವಾರ ಸಂಜೆ ಕೊಲೆ ಮಾಡಿದ್ದಾರೆ.

‘ಸ್ಥಳೀಯ 2ನೇ ಹಂತದ ನಿವಾಸಿ ಕಮಲಾ, ಸ್ವಂತ ಮನೆಯಲ್ಲಿ ವಾಸವಿದ್ದರು. ಅವರ ಪತಿ ಕೆಲ ತಿಂಗಳ ಹಿಂದೆಯಷ್ಟೇ ತೀರಿಕೊಂಡಿದ್ದರು. ಮಕ್ಕಳು ಬೇರೆಡೆ ವಾಸವಿದ್ದಾರೆ. ಹೀಗಾಗಿ, ಕಮಲಾ ಒಬ್ಬರೇ ಮನೆಯಲ್ಲಿ ನೆಲೆಸಿದ್ದರು’ ಎಂದು ಪೊಲೀಸರು ಹೇಳಿದರು.

‘ಶನಿವಾರ ಸಂಜೆ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು, ಕಮಲಾ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ, ಕೈ–ಕಾಲು ಕಟ್ಟಿಹಾಕಿ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.’

‘ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಹೋಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪರಿಚಯಸ್ಥರೇ ಕೃತ್ಯ ಎಸಗಿರುವ ಅನುಮಾನವಿದ್ದು, ತನಿಖೆ ಮುಂದುವರಿಸಲಾಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ಸಂಶಯವಿದೆ. ವೃದ್ಧೆಯ ಸಂಬಂಧಿಕರಿಂದ ಹೆಚ್ಚಿನ ಮಾಹಿತಿ ಪಡೆಯಬೇಕಿದೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.