ಬೆಂಗಳೂರು: ಗಾಂಧಿ ಜಯಂತಿ (ಅಕ್ಟೋಬರ್ 2) ದಿನದಂದು ಮಹಾಲಯ ಅಮಾವಾಸ್ಯೆಯ ಪ್ರಯುಕ್ತ ಪಿತೃಪಕ್ಷ ಹಬ್ಬವೂ ಇದೆ. ಇದನ್ನು ವಿಶೇಷ ಸಂದರ್ಭವೆಂದು ಪರಿಗಣಿಸಿ ಆ ದಿನ ಮಾಂಸ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು ಎಂದು ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

‘ಪ್ರತಿವರ್ಷ ಮಹಾಲಯ ಅಮಾವಾಸ್ಯೆಯ ಪಿತೃಪಕ್ಷ ಹಬ್ಬದಂದು ರಾಜ್ಯದ ಕೋಟ್ಯಂತರ ಜನರು ಮಾಂಸಹಾರವನ್ನು ಸಿದ್ಧಪಡಿಸಿ ತಮ್ಮ ಹಿರಿಯರಿಗೆ ಎಡೆ ಹಾಕಿ, ಪೂಜೆ ಮಾಡುತ್ತಾರೆ. ಬಂಧು ಬಳಗ, ಸ್ನೇಹಿತರೊಂದಿಗೆ ಸೇರಿ ಊಟ ಮಾಡುವುದರ ಮೂಲಕ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಕಾಕತಾಳೀಯವೆಂಬಂತೆ ಅದೇ ದಿನ ಗಾಂಧಿ ಜಯಂತಿ ಬಂದಿದೆ. ಅ. 2ರಂದು ಪ್ರಾಣಿ ವಧೆ ನಿಷೇಧಿಸಲಾಗಿದೆ. ಇದರಿಂದ, ಪಿತೃಪಕ್ಷ ಹಬ್ಬ ಆಚರಿಸುವವರಿಗೆ ಅಡಚಣೆ ಆಗಲಿದ್ದು, ಆ ದಿನ ಮಾಂಸ ಮಾರಾಟಕ್ಕೆ ಅವಕಾಶ ನೀಡಬೇಕು’ ಎಂದು ವೇದಿಕೆ ಅಧ್ಯಕ್ಷ ಬಿ.ಎಂ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಿದ್ದಾರೆ.

‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಬಗ್ಗೆ ನಮ್ಮ ರಾಜ್ಯದ ಜನರಿಗೆ ಗೌರವವಿದೆ. ಹಾಗೆಯೇ ಹಲವಾರು ಶತಮಾನಗಳಿಂದ ಆಚರಿಸಿಕೊಂಡು ಬಂದಿರುವ ಪಿತೃಪಕ್ಷ ಹಬ್ಬದಂದು ಮಾಂಸಹಾರದ ತಯಾರಿ ಮತ್ತು ಸೇವನೆಯೂ ಅನಿವಾರ್ಯವಾಗಿದೆ. ಜನರ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಆ ದಿನ ಮಾಂಸ ಮಾರಾಟಕ್ಕೆ ಅವಕಾಶ ಕಲ್ಪಿಸಿಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.