ಬೆಂಗಳೂರು: ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಘದ ಚುನಾವಣೆ ಸೋಮವಾರ ನಡೆಯಿತು.

ಅಧ್ಯಕ್ಷೆಯಾಗಿ ನೇಹಾ ನಾಜ್, ಉಪಾಧ್ಯಕ್ಷೆಯಾಗಿ ಎನ್.ಪಲ್ಲವಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಹರ್ಷಿತ ಆಯ್ಕೆಯಾಗಿದ್ದಾರೆ.

‘ಇವಿಎಂ ಮೂಲಕ ಮತದಾನ ನಡೆಸಲಾಯಿತು. ಇಬ್ಬರು ಜಂಟಿ ಕಾರ್ಯದರ್ಶಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಕನ್ನಡ ವಿಭಾಗದ ಉಪನ್ಯಾಸಕ ಮಂಜುನಾಥ್ ಮಾಹಿತಿ ನೀಡಿದರು.

‘ಈ ಚುನಾವಣೆಯಲ್ಲಿ ರಾಜಕೀಯಕ್ಕೆ ಅವಕಾಶ ಇರಲಿಲ್ಲ. ಎಬಿವಿಪಿ ಸೇರಿದಂತೆ ಯಾವುದೇ ಸಂಘಟನೆಗಳು ಭಾಗವಹಿಸಿಲ್ಲ. ಯುಜಿಸಿ ನಿಯಮಗಳ ಪ್ರಕಾರ ಸತತ ಎರಡನೇ ವರ್ಷ ಚುನಾವಣೆ ನಡೆದಿದೆ’ ಎಂದು ತಿಳಿಸಿದರು.

‘ಈ ಸಂಘ ಸಾಂಸ್ಕೃತಿಕ ಚಟುವಟಿಕೆ ನಡೆಸಲು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.