ಬೆಂಗಳೂರು: ‘ಕೋವಿಡ್ ಪರಿಣಾಮ ಉದ್ಯೋಗ ಕಳೆದುಕೊಂಡಿದ್ದೇನೆ. ನನಗೆ ಯಾವುದೇ ಆದಾಯವಿಲ್ಲ. ಆದ
ಕಾರಣ ಜೀವನ ನಿರ್ವವಣೆಗೆ ಪತ್ನಿಯಿಂದ ಜೀವನಾಂಶ ಕೊಡಿ ಸಬೇಕು’ ಎಂದು ಕೋರಲಾಗಿದ್ದ ಅರ್ಜಿದಾರರೊಬ್ಬರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಈ ಸಂಬಂಧ ಬೆಂಗಳೂರಿನ ಕನಕಪುರ ರಸ್ತೆಯ ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ದುಡಿಯಲು ಸಾಮರ್ಥ್ಯ ಹೊಂದಿರುವ ಪತಿಗೆ ಜೀವನಾಂಶ ನೀಡುವಂತೆ ಪತ್ನಿಗೆ ಆದೇಶಿಸಿದರೆ ಅದು ಸೋಮಾರಿತನವನ್ನು ಪ್ರೋತ್ಸಾಹಿಸಿದಂತಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.

‘ಉದ್ಯೋಗ ಹಾಗೂ ಆದಾಯವಿಲ್ಲದ ಕಾರಣ ಪತ್ನಿಗೆ ಜೀವನಾಂಶ ನೀಡಲಾಗದ ಸ್ಥಿತಿಯಲ್ಲಿದ್ದೇನೆ. ಆದ್ದರಿಂದ, ಪತ್ನಿಯೇ ಜೀವನಾಂಶ ನೀಡಬೇಕು ಎಂಬ ಪತಿಯ ವಾದ ದೋಷಪೂರಿತವಾಗಿದೆ. ಈ ಪ್ರಕರಣವನ್ನು ಗಮನಿಸಿದರೆ ಪತಿ ತನ್ನ ಪತ್ನಿಯಿಂದ ಜೀವನಾಂಶ
ಪಡೆದು ಆರಾಮಾಗಿ ಜೀವನ ನಡೆಸಲು ನಿರ್ಧರಿಸಿ ದಂತಿದೆ. ತನ್ನ ಹಾಗೂ ಪತ್ನಿ ಸೇರಿದಂತೆ ಮಗುವಿನ ಜೀವನ ನಿರ್ವಹಣೆಗೆ ಪತಿ ದುಡಿಯಬೇಕು. ಇದು ಆತನ ಆದ್ಯ ಕರ್ತವ್ಯ‘ ಎಂದು ನ್ಯಾಯಪೀಠ ಹೇಳಿದೆ.

‘ಅರ್ಜಿದಾರ ಪತಿ ದುಡಿಯಲು ಸಾಮರ್ಥ್ಯವಿರುವ ವ್ಯಕ್ತಿ. ಯಾವುದೇ ಅಂಗವೈಕಲ್ಯ ಅಥವಾ ದೌರ್ಬಲ್ಯದಿಂದ ನರಳುತ್ತಿಲ್ಲ. ಹಿಂದೂ ವಿವಾಹ ಕಾಯ್ದೆಯ ಕಲಂ 24ರ ಅಡಿಯಲ್ಲಿ ಜೀವನಾಂಶ ಪಡೆಯಲು ಯಾವುದೇ ಲಿಂಗ ಭೇದವಿಲ್ಲ ಎಂಬ ಕಾರಣಕ್ಕೆ ದುಡಿಯಲು ಸಾಮರ್ಥ್ಯವಿರುವ ಪತಿಗೆ ಪತ್ನಿಯಿಂದ ಜೀವನಾಂಶ ವಿತರಣೆಗೆ ಆದೇಶಿಸಿದರೆ, ಸೋಮಾರಿತನಕ್ಕೆ ಪ್ರೋತ್ಸಾಹಿಸಿದಂತಾಗುತ್ತದೆ. ಕೋವಿಡ್-19 ರ ಕಾರಣ ಉದ್ಯೋಗ ಕಳೆದುಕೊಂಡ ಎಂಬ ಕಾರಣಕ್ಕೆ ಪತಿ ಆದಾಯ ಗಳಿಸಲು ಸಮರ್ಥ\ ನಾಗಿಲ್ಲ ಎಂದು ಹೇಳಲಾಗದು’ ಎಂದು ನ್ಯಾಯಪೀಠ ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.