ಬೆಂಗಳೂರು: ಯಲಹಂಕ ನ್ಯೂಟೌನ್ ಬಳಿಯ ಡೇರಿ ವೃತ್ತದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದ್ದು, ಪರಿಚಯಸ್ಥರೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

‘ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. 30ರಿಂದ 35 ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮದ್ಯದ ಅಮಲಿನಲ್ಲಿದ್ದರು ಎನ್ನಲಾದ ವ್ಯಕ್ತಿ, ಡೇರಿ ವೃತ್ತದಲ್ಲಿ ಶುಕ್ರವಾರ ರಾತ್ರಿ ಓಡಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಗಲಾಟೆ ನಡೆದು, ಕೊಲೆ ಆಗಿರುವ ಅನುಮಾನವಿದೆ. ಕೃತ್ಯದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದರು.

‘ಮೃತ ವ್ಯಕ್ತಿಯ ಫೋಟೊವನ್ನು ಎಲ್ಲ ಠಾಣೆಗಳಿಗೆ ಕಳುಹಿಸಲಾಗಿದೆ. ಜೊತೆಗೆ, ಆರೋಪಿಗಳನ್ನು ಪತ್ತೆ ಮಾಡಲು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.