ಬೆಂಗಳೂರು: ಮೀಟರ್ ಬಡ್ಡಿ ದಂಧೆಯಲ್ಲಿ ತೊಡಗಿದ್ದ ಆರೋಪದಡಿ ಶ್ರೀರಾಮ್ ಹಾಗೂ ಮಗ ಕಲ್ಯಾಣ್ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರಿಬ್ಬರು ತಲೆಮರೆಸಿಕೊಂಡಿದ್ದಾರೆ.

‘ಮೀಟರ್ ಬಡ್ಡಿ ವ್ಯವಹಾರ ಸಂಬಂಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದ ಅನುಮತಿ ಪಡೆದು ಶ್ರೀರಾಮ್ ಮನೆ ಮೇಲೆ ದಾಳಿ ಮಾಡಲಾಗಿದೆ. 100ಕ್ಕೂ ಹೆಚ್ಚು ಜನರ ಚೆಕ್ಗಳು, ವಾಹನಗಳ ನೋಂದಣಿ ಪ್ರಮಾಣ ಪತ್ರಗಳು, ಆಸ್ತಿಗೆ ಸಂಬಂಧಪಟ್ಟ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಕಮಿಷನರ್ ಬಿ. ದಯಾನಂದ್ ತಿಳಿಸಿದರು.

‘ಶ್ಯಾಮಣ್ಣ ಗಾರ್ಡನ್ನ ಶ್ರೀರಾಮ್, ಹಲವು ವರ್ಷಗಳಿಂದ ಬಡ್ಡಿ ವ್ಯವಹಾರ ಮಾಡುತ್ತಿದ್ದ. ಕಂಪನಿಯೊಂದರ ಉದ್ಯೋಗಿ ಆಗಿರುವ ಮಗ ಕಲ್ಯಾಣ್ಕುಮಾರ್ ಸಹ ವ್ಯವಹಾರಕ್ಕೆ ಸಹಕರಿಸುತ್ತಿದ್ದ. ಜನರಿಗೆ ಸಾಲ ಕೊಡುತ್ತಿದ್ದ ಇವರಿಬ್ಬರು, ಹೆಚ್ಚು ಬಡ್ಡಿ ವಸೂಲಿ ಮಾಡುತ್ತಿದ್ದರು. ಈ ಬಗ್ಗೆ ಕೆಲವರು, ಸಹಕಾರ ಇಲಾಖೆಗೆ ದೂರು ನೀಡಿದ್ದರು’ ಎಂದು ಹೇಳಿದರು.

‘ಪರಿಶೀಲನೆ ನಡೆಸಿದ್ದ ಸಹಕಾರ ಇಲಾಖೆಯ ಅಧಿಕಾರಿಗಳು ದೂರು ನೀಡಿದ್ದರು. ಅದರನ್ವಯ ತಂದೆ–ಮಗನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇಬ್ಬರಿಗೂ ನೋಟಿಸ್ ನೀಡಲಾಗಿದ್ದು, ಇದುವರೆಗೂ ವಿಚಾರಣೆಗೆ ಬಂದಿಲ್ಲ. ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದಾರೆ. ಇವರ ಪತ್ತೆಗಾಗಿ ಶೋಧ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.