ವೈಟ್ಫೀಲ್ಡ್: ‘ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳ ಕೈಯಿಂದ ಒಂದೊಂದು ಸಸಿ ನೆಟ್ಟು ಮಕ್ಕಳಂತೆಯೇ ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು’ ಎಂದು ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಮನವಿ ಮಾಡಿದರು.

ದೊಡ್ಡನೆಕ್ಕುಂದಿ ವಾರ್ಡ್ನ ಗ್ರೀನ್ ಡೊಮೈನ್ ಬಡಾವಣೆಯಲ್ಲಿ ರೆಸಿಡೆನ್ಸಿ ವೆಲ್ಫೇರ್ ಅಸೋಸಿಯೇಷನ್ ಹಾಗೂ ಬಿಬಿಎಂಪಿ ವತಿಯಿಂದ ಹಮ್ಮಿಕೊಂಡಿದ್ದ ಮಿನಿ ಅರಣ್ಯ ನಿರ್ಮಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪಾಲಿಕೆ ಸದಸ್ಯೆ ಶ್ವೇತಾ ವಿಜಯಕುಮಾರ್, ‘ಕೊಳಚೆ ನೀರನ್ನು ಸಂಸ್ಕರಣಾ ಘಟಕದ ಮೂಲಕ ಶುದ್ಧೀಕರಿಸಿ ಅದನ್ನು ಗಿಡ ಬೆಳೆಸಲು ಬಳಸಲಾಗುತ್ತದೆ’ ಎಂದು ತಿಳಿಸಿದರು.

250ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗಿದ್ದು, ಗಿಡಗಳಲ್ಲಿಯೇ ತಟ್ಟೆಯಲ್ಲಿ ನೀರಿಡುವ ಮೂಲಕ ಪಕ್ಷಿಗಳ ದಾಹ ನೀಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.