ಬೆಂಗಳೂರು: ‘ಯಾರೋ ಕೆಲವು ಮನುವಾದಿಗಳನ್ನು ಮೆಚ್ಚಿಸಲು ಸರ್ಕಾರಿ ನೌಕರರಿಗೆ ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘದ) ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿರುವ ಕೇಂದ್ರ ಸರ್ಕಾರದ ನಿಲುವು ಅತ್ಯಂತ ಅಪಾಯಕಾರಿ’ ಎಂದು ಸಚಿವ ಡಾ. ಎಚ್.ಸಿ.ಮಹದೇವಪ್ಪ ಹೇಳಿದರು.

‘ಸರ್ಕಾರ ಎಂಬುದು ಸದಾ ನ್ಯಾಯ ಪ್ರಜ್ಞೆಯನ್ನು ಇಟ್ಟುಕೊಂಡು ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿ ಪ್ರಜಾಪ್ರಭುತ್ವದ ಆಶಯಕ್ಕೆ ಅನುಸಾರವಾಗಿ ಕೆಲಸ ಮಾಡಬೇಕು. ಸರ್ಕಾರದ ಭಾಗವಾಗಿ ಕೆಲಸ ಮಾಡುವ ಸರ್ಕಾರಿ ನೌಕರರೂ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಭಾಗವಾಗಿರುತ್ತಾರೆ. ಹೀಗಿರುವಾಗ ನೀವು ಇಂತದ್ದೇ ತಿನ್ನಬೇಕು, ಇಂತಹದ್ದೇ ಉಡುಪು ಧರಿಸಬೇಕು, ಹೀಗೇ ಬದುಕಬೇಕು ಮತ್ತು ಹೇಳುವ ರೀತಿಯಲ್ಲೇ ಬದುಕಬೇಕು ಎನ್ನುವ ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದು ಯಾವ ರೀತಿಯಲ್ಲೂ ಸರಿಯಲ್ಲ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಪ್ರಜಾಪ್ರಭುತ್ವ ವಿರೋಧಿ ನೀತಿಗಳನ್ನು ಆಳವಾಗಿ ಅಳವಡಿಸಿಕೊಂಡು, ಎಲ್ಲರನ್ನೂ ಕಾಪಾಡುವ ಸಂವಿಧಾನದ ರೀತಿ ನೀತಿಗಳನ್ನು ಗಾಳಿಗೆ ತೂರಿ ಜೀವಿಸಲು ಆರ್ಎಸ್ಎಸ್ ಇಚ್ಛಿಸುತ್ತದೆ. ಅಂತಹ ಸಂಸ್ಥೆಯ ಚಟುವಟಿಕೆಗಳಲ್ಲಿ, ಸಂವಿಧಾನದ ಸೇವಕರಾಗಿ ಕೆಲಸ ಮಾಡುವ ನೌಕರರು ಭಾಗವಹಿಸಲು ಅವಕಾಶ ಕಲ್ಪಿಸುವ ಆದೇಶವನ್ನು ಕೇಂದ್ರ ಸರ್ಕಾರ ಕೂಡಲೇ ರದ್ದುಪಡಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.