ಯಲಹಂಕ: ಕೆಬಿಜಿ ಸ್ವಯಂ ಸೇವಕರು ಹಾಗೂ ಡಾ.ಸೋಲಂಕಿ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ ಕಟ್ಟಿಗೇನಹಳ್ಳಿಯಲ್ಲಿ ಯುವ ಕಾಂಗ್ರೆಸ್ ಮುಖಂಡರಾಗಿದ್ದ ದಿವಂಗತ ಸಂತೋಷ್ ಬೆಳ್ಳೂಟಿ ಅವರ ಸ್ಮರಣಾರ್ಥ ಆಯೋಜಿಸಿದ್ದ ನೇತ್ರ ಉಚಿತ ತಪಾಸಣಾ ಶಿಬಿರವನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ‘ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಸಂತೋಷ್ ಬೆಳ್ಳೂಟಿ ಅವರು, ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅಂತಹ ನಿಷ್ಠಾವಂತ ಕಾರ್ಯಕರ್ತನ ಹೆಸರಿನಲ್ಲಿ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸುವ ಮೂಲಕ ಬಡಜನರಿಗೆ ಕಣ್ಣಿನ ತಪಾಸಣೆ, ಅಗತ್ಯವಿದ್ದವರಿಗೆ ಕನ್ನಡಕ ವಿತರಣೆ ಹಾಗೂ ಕಣ್ಣಿನಪೊರೆ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

ಶಿಬಿರದಲ್ಲಿ ಒಟ್ಟು 325 ಜನರಿಗೆ ರಕ್ತದೊತ್ತಡ, ಮಧುಮೇಹ ಹಾಗೂ ಕಣ್ಣಿನ ತಪಾಸಣೆ ನಡೆಸಲಾಯಿತು. ಇದರಲ್ಲಿ 240 ಮಂದಿಗೆ ಉಚಿತವಾಗಿ ಕನ್ನಡಕ ಹಾಗೂ ಔಷಧ ವಿತರಿಸಲಾಯಿತು. ಜೊತೆಗೆ ಕಣ್ಣಿನಪೊರೆ ಶಸ್ತ್ರಚಿಕಿತ್ಸೆ ಅವಶ್ಯಕತೆಯಿದ್ದ 37 ಮಂದಿಯನ್ನು ಗುರುತಿಸಿ, ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು.

ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಶೇಷಾದ್ರಿ, ಕಾಂಗ್ರೆಸ್ ಮುಖಂಡರಾದ ಎಚ್.ಎ.ಶಿವಕುಮಾರ್, ಗೋಪಾಲ್ ರೆಡ್ಡಿ, ಚಂದನ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.