ಬೆಂಗಳೂರು: ಸಾಹಿತಿ ಚಂದ್ರಶೇಖರ ಕಂಬಾರ ಹೆಸರಿನಲ್ಲಿ ಸಂದೇಶ ಕಳುಹಿಸಿ ಹಣ ಕೇಳುತ್ತಿರುವ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರೂ ಆದ ಚಂದ್ರಶೇಖರ ಕಂಬಾರ ಅವರು ಬುಧವಾರ (ಜೂನ್ 1) ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಚಂದ್ರಶೇಖರ ಕಂಬಾರ ಅವರ ಹೆಸರು, ವಿಳಾಸ ಹಾಗೂ ಫೋಟೊ ಬಳಸಿಕೊಂಡು ಕೆಲವರ ಮೊಬೈಲ್‌ಗಳಿಗೆ ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಲಾಗಿದೆ. ‘ನಾನು ಕಷ್ಟದಲ್ಲಿದ್ದೇನೆ. ನನಗೆ ಧನಸಹಾಯ ಮಾಡಿ’ ಎಂಬುದಾಗಿ ಸಂದೇಶದಲ್ಲಿ ಬರೆಯಲಾಗಿದೆ.’

‘ನಕಲಿ ದಾಖಲೆ ಬಳಸಿ ಸಿಮ್‌ಕಾರ್ಡ್ ಖರೀದಿಸಿರುವ ವಂಚಕರು, ಅವುಗಳನ್ನು ಬಳಸಿಕೊಂಡು ಸಂದೇಶ ಕಳುಹಿಸಿದ್ದಾರೆ. ಮೊಬೈಲ್ ಸಂಖ್ಯೆ ಆಧರಿಸಿ ಆರೋಪಿಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದೂ ತಿಳಿಸಿದರು.

ಹೆಸರು ದುರುಪಯೋಗ: ‘ನನ್ನ ಹೆಸರು ದುರುಪಯೋಗಪಡಿಸಿಕೊಂಡು, ಅಪಪ್ರಚಾರ ಮಾಡಲಾಗುತ್ತಿದೆ. ಧನಸಹಾಯದ ಬಗ್ಗೆ ಬರುವ ಸಂದೇಶಗಳನ್ನು ಸಾರ್ವಜನಿಕರು ನಂಬಬಾರದು’ ಎಂದು ಚಂದ್ರಶೇಖರ ಕಂಬಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.