ಬೆಂಗಳೂರು: ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳನ್ನು ಪೊಲೀಸರು ಮಂಗಳೂರಿನಿಂದ ಬುಧವಾರ ಬೆಳಿಗ್ಗೆನಗರಕ್ಕೆ ಕರೆತಂದಿದ್ದಾರೆ. ಅವರಿಂದ ಲಿಖಿತ ಹೇಳಿಕೆ ಪಡೆದು ಮನೆಗೆ ಕಳುಹಿಸಿಕೊಟ್ಟಿದ್ದಾರೆ.

ಬಿಸಿಎ ಮೂರನೇ ವರ್ಷದ ವಿದ್ಯಾರ್ಥಿನಿ ಅಮೃತವರ್ಷಿಣಿ (21), 12 ವರ್ಷ ವಯಸ್ಸಿನ ರಾಯನ್ ಸಿದ್ದಾರ್ಥ್, ಚಿಂತನ್ ಹಾಗೂ ಭೂಮಿ ಎಂಬುವರು ಮಂಗಳೂರಿನಲ್ಲಿ ಮಂಗಳವಾರ ಪತ್ತೆಯಾಗಿದ್ದರು. ವಿಷಯ ತಿಳಿದೊಡನೇ ಪೋಷಕರೊಂದಿಗೆ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದ ಸೋಲದೇವನಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ನೇತೃತ್ವದ ತಂಡ ಅಲ್ಲಿಯ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಮಕ್ಕಳನ್ನು ಕರೆತಂದಿದೆ.

‘ಮನೆ ಬಿಟ್ಟುಹೋಗಲು ನಿಖರ ಕಾರಣವೇನು ಎಂಬುದರ ಕುರಿತು ಮಕ್ಕಳಿಂದ ಹೇಳಿಕೆ ಪಡೆದುಕೊಳ್ಳಲಾಗಿದೆ. ಬುದ್ದಿಮಾತು ಹೇಳಿ ಅವರನ್ನು ಮನೆಗೆ ಕಳುಹಿಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.