ಬೆಂಗಳೂರು: ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ನಿಧನರಾಗಿರುವ ಕಾರಣದಿಂದ ವಿಧಾನಮಂಡಲ ಅಧಿವೇಶನವು ಬುಧವಾರದವರೆಗೆ ವಿಸ್ತರಣೆಯಾಗಲಿದೆ.

ಬಜೆಟ್ ಮೇಲಿನ ಚರ್ಚೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಉತ್ತರ ನೀಡಬೇಕಿತ್ತು. ಆ ಬಳಿಕ ಬಜೆಟ್ ಮತ್ತು ಪ್ರಸಕ್ತ ವರ್ಷದ ಪೂರಕ ಅಂದಾಜುಗಳಿಗೆ ಒಪ್ಪಿಗೆ ಪಡೆದು, ಅಧಿವೇಶನವನ್ನು ಮುಕ್ತಾಯಗೊಳಿಸಲು ತೀರ್ಮಾನಿಸಲಾಗಿತ್ತು.

ವೆಂಕಟಪ್ಪ ನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಸಿದ್ದರಾಮಯ್ಯ, ‘ಹಾಲಿ ಶಾಸಕ ನಿಧನರಾಗಿರುವುದರಿಂದ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಕಲಾಪ ನಡೆಯುವುದಿಲ್ಲ, ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ’ ಎಂದರು.
.ಸುರಪುರ: ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.