ಬೆಂಗಳೂರು: ನಗರದ ಸಾರ್ವಜನಿಕ ಸ್ಥಳ ಹಾಗೂ ಬಸ್‌ಗಳಲ್ಲಿ ಜನರ ಮೊಬೈಲ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಎಚ್‌ಎಎಲ್ ಠಾಣೆ ಪೊಲೀಸರು, ಅವರಿಂದ ₹ 17 ಲಕ್ಷ ಮೌಲ್ಯದ 65 ಮೊಬೈಲ್ ಜಪ್ತಿ ಮಾಡಿದ್ದಾರೆ.

‘ಬಸ್ ಪ್ರಯಾಣಿಕರ ಮೊಬೈಲ್ ಕಳ್ಳತನ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ಕೈಗೊಂಡು ಮೂವರನ್ನು ಬಂಧಿಸಲಾಗಿದೆ. ನಗರದ ಹಲವು ಠಾಣೆಗಳ ವ್ಯಾಪ್ತಿಯಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿಗಳು, ಪ್ರಯಾಣಿಕರು ಹೆಚ್ಚಿರುತ್ತಿದ್ದ ಬಸ್ ಹತ್ತುತ್ತಿದ್ದರು. ನೂಕುನುಗ್ಗಲಿನಲ್ಲಿ ಪ್ರಯಾಣಿಕರ ಮೊಬೈಲ್ ಕದ್ದು ಪರಾರಿಯಾಗುತ್ತಿದ್ದರು. ಸಿಮ್ ಕಾರ್ಡ್ ತೆಗೆದು ಎಸೆಯುತ್ತಿದ್ದರು. ನಂತರ, ಮೊಬೈಲ್‌ಗಳನ್ನು ಕಡಿಮೆ ಬೆಲೆಗೆ ಮಾರುತ್ತಿದ್ದರು. ಬಂದ ಹಣವನ್ನು ದುಶ್ಚಟಗಳಿಗೆ ಖರ್ಚು ಮಾಡುತ್ತಿದ್ದರು. ಹಣ ಖಾಲಿಯಾಗುತ್ತಿದ್ದಂತೆ ಪುನಃ ಕಳ್ಳತನಕ್ಕೆ ಇಳಿಯುತ್ತಿದ್ದರು’ ಎಂದು ತಿಳಿಸಿದರು.‘

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.