ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 469 ಡೆಂಗಿ ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 15 ಸಾವಿರದ ಗಡಿ (15,101) ದಾಟಿದೆ.

ಕಳೆದ ಹತ್ತು ದಿನಗಳಲ್ಲಿಯೇ ಐದು ಸಾವಿರಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿವೆ. 24 ಗಂಟೆಗಳ ಅವಧಿಯಲ್ಲಿ 3,371 ಪರೀಕ್ಷೆಗಳನ್ನು ನಡೆಸಲಾಗಿದ್ದು, 27 ಜಿಲ್ಲೆಗಳಲ್ಲಿ ಹೊಸದಾಗಿ ಡೆಂಗಿ ಪ್ರಕರಣಗಳು ವರದಿಯಾಗಿವೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 1,681 ಪರೀಕ್ಷೆಗಳನ್ನು ನಡೆಸಲಾಗಿದ್ದು, 229 ಪ್ರಕರಣಗಳು ದೃಢಪಟ್ಟಿವೆ. ಹಾಸನದಲ್ಲಿ 28, ವಿಜಯಪುರದಲ್ಲಿ 23, ಬೆಳಗಾವಿಯಲ್ಲಿ 21 ಹಾಗೂ ಚಿತ್ರದುರ್ಗದಲ್ಲಿ 20 ಪ್ರಕರಣಗಳು ವರದಿಯಾಗಿವೆ. ಉಳಿದೆಡೆ ಇದಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಸದ್ಯ 3,384 ಡೆಂಗಿ ಸಕ್ರಿಯ ಪ್ರಕರಣಗಳಿದ್ದು, ಡೆಂಗಿ ಪೀಡಿತರಲ್ಲಿ ಸದ್ಯ 2,744 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. 14 ಮಂದಿ ತೀವ್ರ ನಿಗಾ ಘಟಕದಲ್ಲಿರುವುದೂ (ಐಸಿಯು) ಸೇರಿದಂತೆ 640 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.