ಬೆಂಗಳೂರು: ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಅತಿ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯಕ್ಕೆ ಆಗ್ರಹಿಸಿ ಪ್ರಬಲ ಹೋರಾಟ ರೂಪಿಸುವ ಉದ್ದೇಶದಿಂದ ನಗರದ ಅರಮನೆ ಮೈದಾನದಲ್ಲಿ ಶನಿವಾರ ಈಡಿಗ ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆ ನಡೆಯಲಿದೆ.

ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಹಲವು ಸಮುದಾಯಗಳ ಮಠಾಧೀಶರು, ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸಭೆಗೂ ಮುನ್ನ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ರಾಜ್ಯದಾದ್ಯಂತ ಹಲವು ಸಭೆಗಳನ್ನು ನಡೆಸಲಾಗಿದೆ. ಸಿದ್ದರಾಮಯ್ಯ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮುನ್ನ ‘ಅಹಿಂದ’ ಚಳವಳಿ ನಡೆಸಿದ್ದರು. ಅದೇ ಮಾದರಿಯಲ್ಲಿ ಅತಿ ಹಿಂದುಳಿದ ವರ್ಗಗಳ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದು, ಪೂರ್ವಭಾವಿ ಸಭೆಯು ರಾಜ್ಯ ರಾಜಕಾರಣದಲ್ಲಿನ ಸಮಕಾಲೀನ ಬೆಳವಣಿಗೆಗಳ ಕುರಿತೂ ಚರ್ಚೆಗೆ ವೇದಿಕೆಯಾಗುವ ಸಾಧ್ಯತೆ ಇದೆ.

ವಿಧಾನ ಪರಿಷತ್‌ನ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಆಂಧ್ರಪ್ರದೇಶದ ವಸತಿ ಸಚಿವ ಜೋಗಿ ರಮೇಶ್, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಕಾಂಗ್ರೆಸ್, ಬಿಜೆಪಿಯಲ್ಲಿರುವ ಹಿಂದುಳಿದ ವರ್ಗಗಳ ಪ್ರಮುಖ ಮುಖಂಡರಿಗೆ ಆಹ್ವಾನ ನೀಡಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಮಂದಿ ಈ ಸಭೆಗೆ ಬರುವ ಸಾಧ್ಯತೆ ಇದೆ. ಅರಮನೆ ಮೈದಾನದಲ್ಲಿ ಸಭೆಗೆ ಸಿದ್ಧತೆಗಳು ಪೂರ್ಣಗೊಂಡಿವೆ. ಶೈಕ್ಷಣಿಕ, ಔದ್ಯೋಗಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ ಎಂಬುದನ್ನು ಪ್ರತಿಪಾದಿಸಲು ಸಭೆಯ ಆಯೋಜಕರು ಸಿದ್ಧತೆ ನಡೆಸಿದ್ದಾರೆ. ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವಂತೆ ಆಗ್ರಹಿಸಿ ನಿರ್ಣಯಗಳನ್ನು ಕೈಗೊಳ್ಳುವುದಕ್ಕೂ ತಯಾರಿ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.