ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಕೆಟ್ಟು ಹೋಗಿರುವುದರಿಂದ ರೋಗಿಗಳು ಪರೀಕ್ಷೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಸ್ಥೆಯಲ್ಲಿ ಒಂದು ಎಂಆರ್‌ಐ ಸ್ಕ್ಯಾನಿಂಗ್ ಯಂತ್ರವಿದೆ. ಕಳೆದ 15 ದಿನಗಳಿಂದ ಈ ಯಂತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ರೋಗಿಗಳು ಎಂಆರ್‌ಐ ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ವಿಕ್ಟೋರಿಯಾ ಸೇರಿ ಕೆಲ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಇನ್ನೂ ಕೆಲವರು ಖಾಸಗಿ ವ್ಯವಸ್ಥೆಯಡಿ ಮಾಡಿಸಿಕೊಳ್ಳುತ್ತಿದ್ದಾರೆ.

‘ಖಾಸಗಿ ವ್ಯವಸ್ಥೆಯಡಿ ಎಂಆರ್‌ಐ ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ₹ 8 ಸಾವಿರದಿಂದ ₹ 10 ಸಾವಿರ ವೆಚ್ಚವಾಗುತ್ತದೆ. ಇದರಿಂದಾಗಿ ಸಮಸ್ಯೆಯಾಗಿದೆ. ಆದಷ್ಟು ಬೇಗ ಕಿದ್ವಾಯಿ ಸಂಸ್ಥೆಯಲ್ಲಿನ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರವನ್ನು ದುರಸ್ಥಿಪಡಿಸಿ, ಪರೀಕ್ಷೆ ನಡೆಸಬೇಕು’ ಎಂದು ರೋಗಿಯೊಬ್ಬರು ಆಗ್ರಹಿಸಿದರು.

‘ಕೆಟ್ಟಿರುವ ಯಂತ್ರದ ದುರಸ್ತಿಗೆ ಕ್ರಮವಹಿಸಲಾಗಿದೆ. ಈ ಯಂತ್ರ ಹಳೆಯದಾಗಿರುವುದರಿಂದ ಹೊಸ ಯಂತ್ರ ಖರೀದಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮತಿಗೆ ಕಾಯುತ್ತಿದ್ದೇವೆ’ ಎಂದು ಸಂಸ್ಥೆಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.