ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಹಗರಣ: ಹೈಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಒತ್ತಾಯ

Published : 6 ಜುಲೈ 2024, 21:06 IST
Last Updated : 6 ಜುಲೈ 2024, 21:06 IST
ಫಾಲೋ ಮಾಡಿ
Comments

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅವ್ಯವಹಾರದಲ್ಲಿ ಪ್ರಭಾವಿ  ರಾಜಕೀಯ ಮುಖಂಡರು ಭಾಗಿದಾರರಾಗಿದ್ದು, ಹೈಕೋರ್ಟ್‌ ನ್ಯಾಯಮೂರ್ತಿಗಳ ನೇತೃತ್ವದಲ್ಲಿಯೇ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿ ರೈತ ಮುಖಂಡ ಕುರುಬೂರು ಶಾಂತಕುಮಾರ್‌  ನೇತೃತ್ವದಲ್ಲಿ ವಿವಿಧ ಸಂಘಟನೆಗಳು ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರಿಗೆ ಮನವಿ ಸಲ್ಲಿಸಿವೆ. 

‘ಒಂದು ವರ್ಷದ ಹಿಂದೆ ಮುಡಾ ಕಚೇರಿಯಲ್ಲಿನ ದಾಖಲೆಗಳು ಹಾಗೂ ಕಡತಗಳು ಕಳುವು ಆಗಿದ್ದವು. ಅದರ ಬಗ್ಗೆ ತನಿಖೆಗೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟಿಸಲಾಗಿತ್ತು. ಆಗಿನ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದರೆ ಪ್ರಭಾವಿಗಳು ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪ್ರಭಾವಿಗಳಿಂದ ಲಪಟಾಯಿಸುವುದು ತಪ್ಪುತಿತ್ತು’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

‘ಸುಳ್ಳು ದಾಖಲೆಗಳನ್ನು ನೀಡಿ ಹಾಲಿ, ಮಾಜಿ ಜನಪ್ರತಿನಿಧಿಗಳು ಹಲವಾರು ನಿವೇಶನಗಳನ್ನು ಪಡೆದು ಕೊಂಡು ಜನರಿಗೆ ಸಿಗಬೇಕಾದ ಸೌಲಭ್ಯವನ್ನು ದುರ್ಬಳಕೆ ಪಡಿಸಿಕೊಂಡಿದ್ದಾರೆ ’ ಎಂದು ತಿಳಿಸಿದರು.

ನಿಯೋಗದಲ್ಲಿ ಕನ್ನಡ ಚಳವಳಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಗುರುದೇವ್ ನಾರಾಯಣ್, ವಕೀಲರಾದ ಎಲ್. ರವಿಕುಮಾರ್, ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಠಪ್ಪ, ಉಡಿಗಾಲ ರೇವಣ್ಣ, ತುಮಕೂರು ಶಿವಕುಮಾರ್, ಬಾಗೇಪಲ್ಲಿ ಗೋವಿಂದರೆಡ್ಡಿ, ಸುಂದ್ರಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT