ಬೆಂಗಳೂರು: ‘ಮಾದಿಗ ಸಮುದಾಯದ ಸಚಿವರಾದ ಕೆ.ಎಚ್. ಮುನಿಯಪ್ಪ ಹಾಗೂ ಆರ್.ಬಿ. ತಿಮ್ಮಾಪೂರ ಅವರಿಗೆ ಮುಖ್ಯಮಂತ್ರಿ ಆಗುವ ಅರ್ಹತೆಗಳಿವೆ. ಆದರೂ, ಅವರಿಗೆ ಉಪಯೋಗವಿಲ್ಲದ ಖಾತೆಗಳನ್ನು ನೀಡಲಾಗಿದೆ’ ಎಂದು ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಮಾದಿಗ ಪ್ರಾಧ್ಯಾಪಕರ ವೇದಿಕೆ ಭಾನುವಾರ ಆಯೋಜಿಸಿದ್ದ ‘ಒಳ ಮೀಸಲಾತಿ: ಚಿಂತನ–ಮಂಥನ’ ಎಂಬ ಎರಡು ದಿನಗಳ ಶಿಬಿರದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಕಾಂಗ್ರೆಸ್ ನೇತೃತ್ವದ ಸರ್ಕಾರದ ಸಂಪುಟ ರಚನೆಯ ಮುನ್ನವೇ ಪ್ರಬಲ ಖಾತೆಯನ್ನು ಪಡೆದುಕೊಳ್ಳುವಂತೆ ಮುನಿಯಪ್ಪ ಅವರಿಗೆ ಸಲಹೆ ನೀಡಿದ್ದೆ. ಆದರೆ ಅದು ಸಾಧ್ಯವಾಗಲಿಲ್ಲ. ಏಳು ಬಾರಿ ಸಂಸದರಾಗಿ, ಮೂರು ಬಾರಿ ಕೇಂದ್ರ ಸಚಿವರಾಗಿರುವ ಮುನಿಯಪ್ಪ ಅವರ ಸೇವೆ ಪರಿಗಣಿಸಿ ಉತ್ತಮ ಸ್ಥಾನಮಾನ ನೀಡಬೇಕು’ ಎಂದು ಒತ್ತಾಯಿಸಿದರು.

‘ಜೆ.ಸಿ. ಮಾಧುಸ್ವಾಮಿ ನೇತೃತ್ವದ ಸಂಪುಟ ಉಪ ಸಮಿತಿ ನಮ್ಮ ಸಮುದಾಯಕ್ಕೆ ಹಂಚಿಕೆ ಮಾಡಿದ್ದ ಮೀಸಲಾತಿಯಲ್ಲಿ ಶೇ 1 ರಷ್ಟು ಕಡಿಮೆಯಾದರೂ ಹೋರಾಟ ಮಾಡಲಾಗುವುದು. ಸಮುದಾಯ ಅಂತ ಬಂದರೆ ಎಡ–ಬಲ ಎಂಬ ಭೇದ– ಭಾವಗಳನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು’ ಕರೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ‘ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಉಪ ಪಂಗಡಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಿಂದುಳಿದಿರುವಿಕೆಯ ಆಧಾರದಲ್ಲಿ ಒಳ ಮೀಸಲಾತಿ ಹಂಚಿಕೆ ಮಾಡಬೇಕು. ಜನಸಂಖ್ಯೆ ಆಧಾರದ ಮೇಲೆ ಒಳಮೀಸಲಾತಿ ಹಂಚಿಕೆ ಮಾಡದಂತೆ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಆಯೋಗಕ್ಕೆ ಮನವಿ ಮಾಡಬೇಕು’ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಮುಖಂಡ ಎಲ್. ಹನುಮಂತಯ್ಯ, ‘ಒಳ ಮೀಸಲಾತಿಯನ್ನು ಜಾರಿಗೊಳಿಸುವ ಸಂದರ್ಭದಲ್ಲಿ ನಿಖರವಾದ ಅಂಕಿ–ಅಂಶಗಳನ್ನು ಆಧಾರವಾಗಿ ಇಟ್ಟುಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದೆ. ನಿಖರ ಅಂಕಿ–ಅಂಶಗಳ ಸಂಗ್ರಹಿಸುವ ಉದ್ದೇಶದಿಂದ ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಲಾಗಿದೆ. ಮೂರು ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.

ವೇದಿಕೆಯ ಪ್ರಧಾನ ಪೋಷಕ ಭೀಮಾಶಂಕರ, ನರಸಿಂಹಮೂರ್ತಿ ಎನ್., ನಿವೃತ್ತ ಐಎಎಸ್ ಅಧಿಕಾರಿಗಳಾದ ಬಾಬುರಾವ್ ಮುಡಬಿ, ಗೋನಾಳ ಭೀಮಪ್ಪ ಉಪಸ್ಥಿತರಿದ್ದರು.

‘ಜ್ಞಾನಪ್ರಕಾಶ ಸ್ವಾಮೀಜಿ ರಾಜಕಾರಣ ಮಾಡುವುದಿಲ್ಲವೆ?’

‘ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಒಳಮೀಸಲಾತಿ ಜಾರಿಗೊಳಿಸುವಂತೆ ಹೋರಾಟ ಮಾಡುತ್ತಿದ್ದಾರೆ. ಆದರೆ ಕೆಲವರು ಇವರನ್ನು ಆರ್ಎಸ್ಎಸ್ ಬಿಜೆಪಿ ಏಜೆಂಟ್ ಎನ್ನುತ್ತಿದ್ದಾರೆ. ಅದೇ ರೀತಿ ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಅವರು ಮಾಡಿದಷ್ಟು ರಾಜಕಾರಣವನ್ನು ಬೇರೆ ಯಾರೂ ಮಾಡುವುದಿಲ್ಲ. ಅವರನ್ನು ಏಕೆ ಕಾಂಗ್ರೆಸ್ ಏಜೆಂಟ್ ಎಂದು ಯಾರೂ ಹೇಳುವುದಿಲ್ಲ’ ಎಂದು ಅಖಿಲ ಭಾರತ ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.