ಬೆಂಗಳೂರು: ಮೂರೂವರೆ ವರ್ಷದ ಮಗಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ರಾಜರಾಜೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಚನ್ನಸಂದ್ರ ಬಳಿಯ ‘ಮಂತ್ರಿ ಆಫ್ಲೈನ್’ ಅಪಾರ್ಟ್ಮೆಂಟ್ ಸಮುಚ್ಚಯದ ಫ್ಲ್ಯಾಟ್ನಲ್ಲಿ ವಾಸವಿದ್ದ ದೀಪಾ (31) ತಮ್ಮ ಮಗಳು ರಿಯಾಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಹಾಗೂ ಸಂಬಂಧಿಕರ ಹೇಳಿಕೆ ಪಡೆದು ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆದರ್ಶ್ ಎಂಬುವರನ್ನು ದೀಪಾ ಮದುವೆಯಾಗಿದ್ದರು. ದಂಪತಿಯು ಮಗಳ ಜೊತೆ ಫ್ಲ್ಯಾಟ್ನಲ್ಲಿ ವಾಸವಿದ್ದರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ದೀಪಾ, ಹಲವೆಡೆ ಚಿಕಿತ್ಸೆ ಪಡೆದಿದ್ದರು. ಆದರೆ, ಗುಣಮುಖವಾಗಿರಲಿಲ್ಲ. ಇದರಿಂದಾಗಿ ಮಾನಸಿಕವಾಗಿ ನೊಂದಿದ್ದರೆಂದು ಗೊತ್ತಾಗಿದೆ.’

‘ಗುರುವಾರ ಫ್ಲ್ಯಾಟ್ನ ಕೊಠಡಿಯಲ್ಲಿದ್ದ ದೀಪಾ, ಮಗಳು ರಿಯಾಳ ಕುತ್ತಿಗೆಗೆ ವೇಲ್ನಿಂದ ಸುತ್ತಿ ಫ್ಯಾನ್ಗೆ ನೇಣು ಬಿಗಿದು ಕೊಂದಿದ್ದರು. ನಂತರ, ತಾನು ಅದೇ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಮರಣ ಪತ್ರ ಪತ್ತೆ: ‘ದೀಪಾ ಬರೆದಿದ್ದಾರೆ ಎನ್ನಲಾದ ಮರಣಪತ್ರ ಕೊಠಡಿಯಲ್ಲಿ ಸಿಕ್ಕಿದೆ. ಅದನ್ನು ವಶಕ್ಕೆ ಪಡೆಯಲಾಗಿದ್ದು, ಕೈಬರಹ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು’ ಎಂದು ಪೊಲೀಸರು ಹೇಳಿದರು.

‘ನನ್ನ ಸಾವಿಗೆ ಯಾರೂ ಹೊಣೆಯಲ್ಲ. ಜೀವನದಲ್ಲಿ ಜುಗುಪ್ಸೆಯಾಗಿದೆ. ಅಮ್ಮ ನನ್ನನ್ನು ಕ್ಷಮಿಸಿ’ ಎಂದು ಮರಣಪತ್ರದಲ್ಲಿ ಬರೆಯಲಾಗಿದೆ’ ಎಂದೂ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.