ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾಗೌಡ ಸೇರಿದಂತೆ 17 ಮಂದಿಯ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.

ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ ಆಗಿದ್ದರಿಂದ ಬುಧವಾರ ಮಧ್ಯಾಹ್ನ ಎಲ್ಲ ಆರೋಪಿಗಳನ್ನು ಕಾರಾಗೃಹದಿಂದಲೇ ವಿಡಿಯೊ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ನ್ಯಾಯಾಧೀಶರು, ಕೆಲವು ಪ್ರಶ್ನೆಗಳನ್ನು ಕೇಳಿ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಿ ಆದೇಶಿಸಿದರು.

ದರ್ಶನ್, ಪವಿತ್ರಾಗೌಡ ಸೇರಿದಂತೆ 13 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ರವಿಶಂಕರ್, ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ, ನಿಖಿಲ್ ನಾಯಕ್ ತುಮಕೂರು ಕಾರಾಗೃಹದಲ್ಲಿದ್ಧಾರೆ.

ಆರೋಪಪಟ್ಟಿ ಸಲ್ಲಿಕೆ ಸಿದ್ಧತೆ:
ರೇಣುಕಸ್ವಾಮಿ ಅವರ ಕೊಲೆ ನಡೆದ ಸ್ಥಳ, ಮೃತದೇಹ ಎಸೆದ ಕಾಲುವೆ ಬಳಿ ಹಾಗೂ ಆರೋಪಿಗಳ ಮನೆಗಳಲ್ಲಿ ಬೆಂಗಳೂರು, ಹೈದರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‌ಎಸ್‌ಎಲ್) ತಜ್ಞರು ಹಲವು ಮಾದರಿ ಸಂಗ್ರಹಿಸಿದ್ದರು. ಅದರಲ್ಲಿ ಶೇ 70ರಷ್ಟು ಪರೀಕ್ಷಾ ವರದಿಗಳು ತನಿಖಾಧಿಕಾರಿಗಳ ಕೈಸೇರಿವೆ. ಉಳಿದ ವರದಿಗಳು ಕೆಲವೇ ದಿನಗಳಲ್ಲಿ ಬರುವ ಸಾಧ್ಯತೆಯಿದ್ದು, ಆರೋಪಪಟ್ಟಿ ಸಲ್ಲಿಕೆಗೆ ಸಿದ್ಧತೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.