ಬೆಂಗಳೂರು: 'ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು' ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಇಲ್ಲಿ ಹೇಳಿದರು.

ನಗರದ ಫ್ರೀಡಂ ಪಾರ್ಕ್ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಂಗಳವಾರ ಪಾಲ್ಗೊಂಡು ಅವರು ಮಾತನಾಡಿದರು.

'ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದೂ ಹೇಳಿದರು.

'ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಿದರೆ ಆಗ, ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ' ಆಗಲಿದೆ ಎಂದು ಹೇಳಿದರು.

'ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಸರ್ಕಾರ ಹೋದರೂ ತೊಂದರೆ ಇಲ್ಲ. ವಕ್ಫ್ ಮಂಡಳಿ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು' ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.