ಬೆಂಗಳೂರು: ‘ಜುಲೈ 1ರಿಂದ ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸರ್ಕಾರ ವನ್ನು ಒತ್ತಾಯಿಸಿದ್ದಾರೆ.

‘ಕಾರ್ಖಾನೆ ಆರಂಭಿಸಸಲು ಸಿದ್ಧತೆ ಕೈಗೊಳ್ಳಬೇಕಾಗಿದೆ. ಕಾರ್ಖಾನೆ ಸ್ಥಿತಿ-ಗತಿ, ಕಬ್ಬಿನ ದರ, ಕಬ್ಬಿನ ಬಾಬ್ತು ಹಣ ಬಟವಾಡೆಗಳ ವಿವರಗಳನ್ನು ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಮತ್ತು ಸಕ್ಕರೆ ಸಚಿವರಿಗೆ ಪತ್ರ ಬರೆದಿರುವ ಅವರು, ‘ಕಾರ್ಖಾನೆಯ ಪುನಃಶ್ಚೇತನಕ್ಕೆ ಬಜೆಟ್ನಲ್ಲಿ ₹50 ಕೋಟಿ ಘೋಷಿಸಲಾಗಿದೆ. ಆದರೆ, ಹಣ ಬಿಡುಗಡೆ ಬಗ್ಗೆ ಪ್ರಸ್ತಾವ ಸಲ್ಲಿಕೆಯಾಗಿಲ್ಲ. ಜುಲೈನಲ್ಲಿ ಕಾರ್ಖಾನೆ ಆರಂಭಿಸುವ ಬಗ್ಗೆ ಸರ್ಕಾರದಿಂದ ಸ್ಪಷ್ಟ ನಿರ್ಧಾರ ಪ್ರಕಟವಾಗಿಲ್ಲ’ ಎಂದು ತಿಳಿಸಿದ್ದಾರೆ.

‘ಸಕ್ಕರೆ ಜತೆಗೆ ವಿದ್ಯುತ್ ಉತ್ಪಾದಿ ಸಲೂ ಕ್ರಮಕೈಗೊಳ್ಳಬೇಕು. ಎಥನಾಲ್ ಘಟಕ ಆರಂಭಿಸಬೇಕು. ಮೈಷುಗರ್ ವ್ಯವಸ್ಥಾಪಕ ನಿರ್ದೇಶಕರಿಗೆ ಕನಿಷ್ಠ ಮೂರು ವರ್ಷ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು ಮತ್ತು ನುರಿತ ತಂತ್ರಜ್ಞರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ಕಾರ್ಖಾನೆ ಸುಸ್ಥಿತಿಗೆ ತರಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.