ಬೆಂಗಳೂರು: ‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿನ ಮೈಸೂರು ರಸ್ತೆ–ಕೆಂಗೇರಿ ವಿಸ್ತರಿತ ಮಾರ್ಗವು ಇದೇ 29ರ ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ. 30ರ ಬೆಳಿಗ್ಗೆಯಿಂದ ವಾಣಿಜ್ಯ ಸೇವೆ ಆರಂಭಗೊಳ್ಳಲಿದೆ.

ಮೈಸೂರು ರಸ್ತೆಯಿಂದ ಕೆಂಗೇರಿಯನ್ನು ಮೆಟ್ರೊ ರೈಲು ಹದಿನೈದೇ ನಿಮಿಷದಲ್ಲಿ ತಲುಪಲಿದೆ. ಪ್ರತಿ 10 ನಿಮಿಷಕ್ಕೊಂದು ರೈಲು ಈ ಮಾರ್ಗದಲ್ಲಿ ಸಂಚರಿಸಲಿದೆ. ಪ್ರಯಾಣಿಕರ ದಟ್ಟಣೆ ಆಧರಿಸಿ ಈ ಸಮಯದಲ್ಲಿ ವ್ಯತ್ಯಾಸವಾಗಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರದೀಪ್‌ಸಿಂಗ್ ಪುರಿ ಅವರು ನಾಯಂಡಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಮಾರ್ಗಕ್ಕೆ ಚಾಲನೆ ನೀಡುವರು. ನಂತರ ಕೆಂಗೇರಿ ಬಸ್ ಟರ್ಮಿನಲ್‌ನಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.