ಬೆಂಗಳೂರು: ನಮ್ಮ ಮೆಟ್ರೊದ ಹಸಿರು ಮಾರ್ಗದ ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು 3 ದಿನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದ ಪೂರ್ವ ನಿಯೋಜಿತ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ, ಜ.26ರಿಂದ 28ರವರೆಗೆ ಮೆಟ್ರೊ ರೈಲು ಸೇವೆಗಳು ಲಭ್ಯವಿರುವುದಿಲ್ಲ ಎಂದು ಹೇಳಿದೆ.
.‘ನಮ್ಮ ಮೆಟ್ರೊ’ದಲ್ಲಿ ರೀಲ್ಸ್ ಮಾಡಿ ಹುಚ್ಚಾಟ: ಯುಟ್ಯೂಬರ್ಗೆ ₹500 ದಂಡ.
ಈ ದಿನಗಳಲ್ಲಿ ಪೀಣ್ಯ ಇಂಡಸ್ಟ್ರಿ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ನಡುವಿನ ರೈಲು ಸಂಚಾರ ಎಂದಿನಂತೆ ಇರಲಿದೆ. ನೇರಳೆ ಬಣ್ಣದ ಮಾರ್ಗದಲ್ಲೂ ಯಾವುದೇ ವ್ಯತ್ಯಯ ಇರುವುದಿಲ್ಲ.

ಜ. 29ರ ಬೆಳಿಗ್ಗೆ 5 ಗಂಟೆಯಿಂದ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಸೇವೆಗಳು ಪುನರಾರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
.‘ನಮ್ಮ ಮೆಟ್ರೊ’ಗೆ ಕೆಂಪೇಗೌಡರ ಹೆಸರಿಡಲು ಒತ್ತಾಯ.
ಈ ಮೂರು ದಿನ ಪೀಣ್ಯ ಇಂಡಸ್ಟ್ರಿ ಮತ್ತು ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ಸಾಧ್ಯತೆ ಇರುವುದರಿಂದ, ವಾಟ್ಸ್‌ಆ್ಯಪ್, ನಮ್ಮ ಮೆಟ್ರೊ ಅಥವಾ ಇತರ ಅಪ್ಲಿಕೇಶನ್‌ಗಳ ಮೂಲಕ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಿ ಎಂದು ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.