ಬೆಂಗಳೂರು: ಬೆಳಿಗ್ಗಿನ ಜನದಟ್ಟಣೆ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್)ನಿಂದ ಗರುಡಾಚಾರ್ ಪಾಳ್ಯವರೆಗೆ ಪ್ರತಿ 3 ನಿಮಿಷಕ್ಕೊಂದು ರೈಲು ಕಾರ್ಯಾಚರಣೆ ನಡೆಸಲಿದೆ ಎಂದು ನಮ್ಮ ಮೆಟ್ರೊ ಹೇಳಿದೆ.

ಶನಿವಾರ ಹಾಗೂ ಭಾನುವಾರ ಹೊರತುಪಡಿಸಿ ಬೆಳಿಗ್ಗೆ 8.45ರಿಂದ 10.20ರವರೆಗಿನ ಅವಧಿಯಲ್ಲಿ ಈ ಮಾರ್ಗದಲ್ಲಿ ಪ್ರತಿ 3 ನಿಮಿಷಕ್ಕೊಂದು ರೈಲು ಸಂಚರಿಸಲಿದೆ.

ಇದರಿಂದ ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಮತ್ತು ಕೆ.ಆರ್.ಪುರ ಮೆಟ್ರೊ ನಿಲ್ದಾಣದ ಕಡೆ ಪ್ರಯಾಣಿಸುವವರಿಗೆ ಹೆಚ್ಚು ಅನುಕೂಲವಾಗಲಿದೆ.

ರೈಲು ಹಾಗೂ ಬಸ್ಸುಗಳ ಮೂಲಕ ಬೆಂಗಳೂರು ನಗರಕ್ಕೆ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್)ನಿಂದ ಎಲ್ಲಾ ದಿಕ್ಕುಗಳಿಗೆ ಮೊದಲ ರೈಲು ಭಾನುವಾರ ಹೊರತುಪಡಿಸಿ ವಾರದ ಎಲ್ಲಾ ದಿನ ಬೆಳಿಗ್ಗೆ 5ರಿಂದ ಪ್ರಾರಂಭವಾಗಲಿದೆ ಎಂದು ನಮ್ಮ ಮೆಟ್ರೊ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.