ಬೆಂಗಳೂರು: ರಾಜರಾಜೇಶ್ವರಿನಗರದ ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ಹಾಕಿದ್ದು, ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

‘ಇದೇ ಜುಲೈ 21ರಂದು ಪರೀಕ್ಷೆಗಳು ನಿಗದಿ ಆಗಿದ್ದವು. ಆದರೆ, ವಿದ್ಯಾರ್ಥಿ ಹೆಚ್ಚು ಓದಿರಲಿಲ್ಲ. ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಭಯವಿತ್ತು. ಪರೀಕ್ಷೆ ಮುಂದೂಡುವ ಉದ್ದೇಶದಿಂದ ಬಾಂಬ್ ಬೆದರಿಕೆ ಕಳುಹಿಸಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ: ಬಾಲಕ ವಶಕ್ಕೆ

‘ತಂದೆಯ ಲ್ಯಾಪ್‌ಟಾಪ್‌ನಲ್ಲಿ ಹುಚ್ಚ ವೆಂಕಟ್ ಹೆಸರಿನಲ್ಲಿ ಇ-ಮೇಲ್ ಸೃಷ್ಟಿಸಿದ್ದ ಬಾಲಕ, ಅದೇ ಇ-ಮೇಲ್‌ನಿಂದ ಶಾಲೆ ಇ-ಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿದ್ದ. ಶಾಲೆ ಕ್ಯಾಂಪಸ್‌ನಲ್ಲಿ ಬಾಂಬ್ ಸ್ಫೋಟಗೊಳ್ಳುವುದಾಗಿ ಬೆದರಿಸಿದ್ದ’ ಎಂದೂ ಮೂಲಗಳು ತಿಳಿಸಿವೆ.

‘ಸೋಮವಾರವೂ ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಬಂದಿದ್ದ. ಪೊಲೀಸರು ಶೋಧ ನಡೆಸುವಾಗಲೂ ಆತ ಕ್ಯಾಂಪಸ್‌ನಲ್ಲಿದ್ದ. ಈತ ಇ-ಮೇಲ್ ಕಳುಹಿಸಿದ್ದ ಸಂಗತಿ ಪೋಷಕರಿಗೂ ಗೊತ್ತಿರಲಿಲ್ಲ’ ಎಂದೂ ಹೇಳಿವೆ.

ಬೆಂಗಳೂರು: ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ

‘ಬಾಲಕ ಓದಿನಲ್ಲೂ ಜಾಣನಾಗಿದ್ದ. ಬಾಲನ್ಯಾಯ ಕಾಯ್ದೆ ಪ್ರಕಾರ ಬಾಲಕನ ಮೇಲೆ ಕ್ರಮ ಜರುಗಿಸಲಾಗಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

ಹುಚ್ಚ ವೆಂಕಟ್ ಹೆಸರಿನಲ್ಲಿ ಬಾಂಬ್ ಬೆದರಿಕೆ: ಡಿ.ಕೆ. ಶಿವಕುಮಾರ್

ಡಿ.ಕೆ.ಶಿವಕುಮಾರ್ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ: ಆತಂಕ ಬೇಡವೆಂದ ಮಗಳು ಐಶ್ವರ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.