ರಾಜರಾಜೇಶ್ವರಿನಗರ: ಮಾಗಡಿ ರಸ್ತೆಯ ಬಿಇಎಲ್ ಬಡಾವಣೆಯಲ್ಲಿರುವ ಯಶವಂತಪುರ ಕ್ಷೇತ್ರ ಶಾಸಕ ಎಸ್.ಟಿ.ಸೋಮಶೇಖರ್ ಅವರ ಕಚೇರಿಯ ಆವರಣದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಒಂಬತ್ತು ದಿನಗಳು, ಪ್ರತಿ ನಿತ್ಯ ಒಂದೊಂದು ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಯಶವಂತಪುರ ಕ್ಷೇತ್ರದ 8 ವಾರ್ಡ್ 17 ಗ್ರಾಮಪಂಚಾಯಿತಿಯ ಮಹಿಳೆಯರು ಪ್ರತಿ ದಿನದ ಉತ್ಸವದಲ್ಲಿ ಪಾಲ್ಗೊಂಡು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಉತ್ಸವದಲ್ಲಿ ಸರ್ವ ಧರ್ಮದವರೂ ಭಾಗವಹಿಸಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ಶಾಸಕರು ಬಹುಮಾನ, ಪ್ರಶಸ್ತಿ ಪತ್ರ, ನಗದು ಬಹುಮಾನಗಳನ್ನು ನೀಡಿದರು.

ವಿಜಯದಶಮಿ ಅಂಗವಾಗಿ ಇಂದು(ಶನಿವಾರ) ನಡೆದ ಬನ್ನಿ ಪೂಜೆಯಲ್ಲಿ ನೂರಾರು ಮಂದಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಈ ಸಂದರ್ಭದಲ್ಲಿ ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ ಕ್ಷೇತ್ರ, ‘ನಾಡಿನ ಜನತೆಗೆ ಆರೋಗ್ಯ ಭಾಗ್ಯ, ನೆಮ್ಮದಿ, ಸಂಪತ್ತು ಸಮೃದ್ದಿಯನ್ನು ದುರ್ಗಾದೇವಿ, ತಾಯಿ ಚಾಮುಂಡೇಶ್ವರಿ ಕರುಣಿಸಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.