ಬೆಂಗಳೂರು: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಜಾಮರ್ನಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆಯಾಗುತ್ತಿದೆ ಎಂದು ಆರೋಪಿಸಿ, ಸ್ಥಳೀಯ ನಿವಾಸಿಗಳು ಕೇಂದ್ರ ಕಾರಾಗೃಹಕ್ಕೆ ಶನಿವಾರ ಮುತ್ತಿಗೆ ಹಾಕಲು ಯತ್ನಿಸಿದರು.

ಪ್ರತಿಭಟನಕಾರರನ್ನು ಪೊಲೀಸರು ತಡೆದರು. ಆಗ ಆಕ್ರೋಶಗೊಂಡ ಸ್ಥಳೀಯರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.

ಕೈದಿಗಳು ಮೊಬೈಲ್ ಬಳಕೆ ಮಾಡದಂತೆ ನಿಯಂತ್ರಿಸಲು ಕಾರಾಗೃಹದಲ್ಲಿ ಜಾಮರ್ ಅಳವಡಿಸಲಾಗಿದೆ. ಇದರಿಂದ ಕಾರಾಗೃಹದ ಸುತ್ತಮುತ್ತಲ ಸುಮಾರು ಎರಡು ಕಿ.ಮೀ ವ್ಯಾಪ್ತಿಯಲ್ಲಿ ಸಾರ್ವಜನಿಕರ ಮೊಬೈಲ್ಗಳಿಗೆ ನೆಟ್ವರ್ಕ್ ಸಿಗದೆ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಹೇಳಿದರು.

‘ಸಮಸ್ಯೆ ಬಗ್ಗೆ ಕಾರಾಗೃಹದ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ’ ಎಂದು ಪ್ರತಿಭಟನಕಾರರು ಅಳಲು ತೋಡಿಕೊಂಡರು.

ಜಾಮರ್ ಅಳವಡಿಸಿರುವುದರಿಂದ ಕಳೆದ ಏಳು ತಿಂಗಳಿಂದ ಮೊಬೈಲ್ ನೆಟ್ವರ್ಕ್ ಸಮಸ್ಯೆಯಾಗಿದೆ. ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ. ವ್ಯಾಪಾರಿಗಳಿಗೆ ಡಿಜಿಟಿಲ್ ವ್ಯವಹಾರಕ್ಕೂ ಸಮಸ್ಯೆಯಾಗಿದೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.