ಬೆಂಗಳೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ರಾಜಾಜಿನಗರದ ಪಾರ್ವತಿ ಸಮಾವೇಶ ಸಭಾಂಗಣದಲ್ಲಿ ಶನಿವಾರ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ವಸತಿ ಸಚಿವ ವಿ. ಸೋಮಣ್ಣ ಉದ್ಘಾಟಿಸುವರು. ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಪತ್ರಿಕಾ ವಿತರಕರಿಗೆ ಸನ್ಮಾನ ಮಾಡುವರು. ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಆಶಯ ನುಡಿ ನುಡಿಯಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು.

ಶಾಸಕ ಎಸ್. ಸುರೇಶ್‌ಕುಮಾರ್, ವಾರ್ತಾ ಇಲಾಖೆ ಆಯುಕ್ತ ಪಿ.ಎಸ್. ಹರ್ಷ, ಮಾರುತಿ ಮೆಡಿಕಲ್ಸ್‌ನ ಮಹೇಂದ್ರ ಮುನೋಟ್ ಜೈನ್, ಮುದ್ರಣ ಮಾಧ್ಯಮದ ಎಲ್ಲ ಸಂಪಾದಕರನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಶಂಭುಲಿಂಗ ಕೆ. ತಿಳಿಸಿದರು.

ರಾಜ್ಯದಲ್ಲಿ 70 ಸಾವಿರಕ್ಕೂ ಹೆಚ್ಚು ಮಂದಿ ಪತ್ರಿಕಾ ವಿತರಕರಾಗಿ ಕೆಲಸ ಮಾಡುತ್ತಿದ್ದಾರೆ. ಅಸಂಘಟಿತ ಕಾರ್ಮಿಕ ವಲಯಕ್ಕೆ ಪತ್ರಿಕಾ ವಿತರಕರನ್ನೂ ಸೇರಿಸಬೇಕು ಎಂಬ ಒತ್ತಾಯವನ್ನು ಸರ್ಕಾರದ ಮುಂದೆ ಇಡಲಾಗುತ್ತಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.