ಬೆಂಗಳೂರು: ‘ನೈಸ್ ಕಂಪನಿಯ ದೌರ್ಜನ್ಯ, ಭ್ರಷ್ಟಾಚಾರ ವಿರೋಧಿಸಿ ಇದೇ 22ರ ಬೆಳಿಗ್ಗೆ 10.30ಕ್ಕೆ ತುಮಕೂರು ರಸ್ತೆಯ ಜಯಸೂರ್ಯ ಗ್ರ್ಯಾಂಡ್ ಕನ್ವೆನ್ಷನ್ ಹಾಲ್‌ನಲ್ಲಿ ನೈಸ್ ಭೂ ಸಂತ್ರಸ್ತ ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ನೈಸ್ ಭೂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎನ್. ವೆಂಕಟಾಚಲಯ್ಯ ತಿಳಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (ಬಿಎಂಐಸಿ) ಯೋಜನೆಗಾಗಿ ನೈಸ್ ಕಂಪನಿ ನಡೆಸಿದ ಭೂ ಸ್ವಾಧೀನದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಂಪನಿಯ ಪಾಲುದಾರಿಕೆ ರದ್ದುಗೊಳಿಸುವುದು, ಭೂ ಸ್ವಾಧೀನ ಹಾಗೂ ರಸ್ತೆ ನಿರ್ಮಾಣದ ಹಗರಣವನ್ನು ತನಿಖೆಗೆ ಒಳಪಡಿಸಿ ಶಿಕ್ಷಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಮಾವೇಶದಲ್ಲಿ ಆಗ್ರಹಿಸಲಾಗುವುದು’ ಎಂದು ಹೇಳಿದರು.

‘ನೈಸ್ ಕಂಪನಿಯ ದೌರ್ಜನ್ಯಕ್ಕೆ ಒಳಗಾಗಿರುವ ಸಾವಿರಾರು ರೈತರ ಜತೆಗೆ ಸ್ಥಳೀಯ ಜನಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.