ಬೆಂಗಳೂರು: ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವರ ಅಂತ್ಯಕ್ರಿಯೆ ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಪದ್ಮನಾಭನಗರದಲ್ಲಿರುವ ಅವರ ನಿವಾಸದ ಮುಂದೆ ಬೆಳಿಗ್ಗೆ 11 ಗಂಟೆಗೆ ಪೊಲೀಸರು ಕುಶಾಲತೋಪು ಹಾರಿಸುವ ಮೂಲಕ ಸರ್ಕಾರಿ ಗೌರವ ಸಲ್ಲಿಸಿದರು. ಇದಕ್ಕೂ ಮೊದಲು ಅವರ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಮಧ್ಯಾಹ್ನ 2.20ಕ್ಕೆ ಜೆ.ಸಿ. ನಗರದ ದೂರದರ್ಶನ ಕಚೇರಿ ಬಳಿ ನಂದಿದುರ್ಗ ರಸ್ತೆಯ ಕಬರಸ್ಥಾನ್ದಲ್ಲಿ ಮುಸ್ಲಿಂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪತ್ನಿಯ ಸಮಾಧಿ ಪಕ್ಕದಲ್ಲೇ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಈ ವೇಳೆ ನಿಸಾರ್ ಅಹಮದ್ ಅವರ ಪುತ್ರ ನವೀದ್ ನಿಸಾರ್ ಸೇರಿದಂತೆ ಕುಟುಂಬಸ್ಥರು ಉಪಸ್ಥಿತರಿದ್ದರು. ಶಾಸಕರಾದ ಯು.ಟಿ.ಖಾದರ್, ಜಮೀರ್ ಅಹಮದ್, ರಿಜ್ವಾನ್ ಅರ್ಷದ್,ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.