ಬೆಂಗಳೂರು: ‘ಸಂಪೂರ್ಣ ಸ್ವರಾಜ್ ಫೌಂಡೇಶನ್’ ಅಭಿವೃದ್ದಿ ಪಡಿಸಿರುವ ದಿಕ್ಸೂಚಿ ಕಲಿಕಾ ತಂತ್ರಜ್ಞಾನಕ್ಕೆ (ಎನ್‌ಎಲ್‌ಟಿ) ಕೇಂದ್ರದ ಪಂಚಾಯತ್‌ರಾಜ್ ಸಚಿವಾಲಯ ಮಾನ್ಯತೆ ನೀಡಿದ್ದು, ಗ್ರಾಮ ಪಂಚಾಯಿತಿ ಸದಸ್ಯರಿಗೆ ತರಬೇತಿ ನೀಡುವಲ್ಲಿ ಅದನ್ನು ಬಳಸಿಕೊಳ್ಳಲು ಮುಂದಾಗಿದೆ.

ಆಗಸ್ಟ್ 24ರಂದು ಕೇಂದ್ರ ಪಂಚಾಯತ್‌ರಾಜ್ ಸಚಿವಾಲಯವು ರಾಷ್ಟ್ರಮಟ್ಟದ ವರ್ಚುವಲ್ ಸಭೆ ಆಯೋಜಿಸಿದೆ. ಗ್ರಾಮ ಪಂಚಾಯಿತಿಗಳ ಸಾಮರ್ಥ್ಯ ವೃದ್ಧಿಗೆ ದಿಕ್ಸೂಚಿ ಕಲಿಕಾ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಅದು ಶಿಫಾರಸು ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

ವರ್ಚುವಲ್ ಸಭೆಯಲ್ಲಿ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಕರ್ನಾಟಕದ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಸಂಪೂರ್ಣ ಸ್ವರಾಜ್ ಫೌಂಡೇಶನ್, ಎನ್‌ಐಸಿ ಸಪೋರ್ಟ್ ಮತ್ತು ಕೇರಳದ ಕೇರಳ ಸ್ಥಳೀಯ ಆಡಳಿತ ಸಂಸ್ಥೆ (ಕಿಲಾ) ಪಾಲ್ಗೊಳ್ಳಲಿವೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.