ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ ಲಾಲ್‌ಬಾಗ್‌ನಲ್ಲಿ ಆಗಸ್ಟ್ 8ರಿಂದ 19ರವರೆಗೆ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಲಾಲ್‌ಬಾಗ್ ಸುತ್ತಮುತ್ತಲ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಅಲ್ಲದೇ ವಾಹನ ನಿಲುಗಡೆಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿದೆ.

ಫಲಪುಷ್ಪ ಪ್ರದರ್ಶನದ ವೀಕ್ಷಣೆಗೆ ಗಣ್ಯರು, ಸಾರ್ವಜನಿಕರು, ಪ್ರವಾಸಿಗರು ಹಾಗೂ ದೇಶ–ವಿದೇಶದ ಪ್ರೇಕ್ಷಕರು ಭೇಟಿನೀಡಲಿದ್ದಾರೆ. ಅಂದಾಜು 8ರಿಂದ 10 ಲಕ್ಷ ಜನರು ಬರುವ ನಿರೀಕ್ಷೆ ಇದೆ. ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲಿದ್ದು, ಸುಗಮ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಸಂಚಾರ ಪೊಲೀಸರು ಹೇಳಿದರು.

ನಿಷೇಧಿತ ರಸ್ತೆಗಳು...
* ಮರೀಗೌಡ ರಸ್ತೆ– ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್‌ವರೆಗೆ ರಸ್ತೆಯ ಎರಡೂ ಬದಿ.
* ಕೆ.ಎಚ್. ರಸ್ತೆ – ಕೆ.ಎಚ್. ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿ.
* ಲಾಲ್‌ಬಾಗ್ ರಸ್ತೆ – ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ.
* ಸಿದ್ದಯ್ಯ ರಸ್ತೆ – ಊರ್ವಶಿ ಚಿತ್ರಮಂದಿರದ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್‌ವರೆಗೆ.
* ಬಿಟಿಎಸ್ ಬಸ್ ನಿಲ್ದಾಣ – ಬಿಎಂಟಿಸಿ ಜಂಕ್ಷನ್‌ನಿಂದ ರಸ್ತೆಯ ಎರಡೂ ಬದಿ.
* ಕೃಂಬಿಗಲ್ ರಸ್ತೆಯ ಎರಡೂ ಬದಿ.
* ಲಾಲ್‌ಬಾಗ್ ವೆಸ್ಟ್‌ಗೇಟ್‌ನಿಂದ ಆರ್.ವಿ. ಟೀಚರ್ಸ್ ಕಾಲೇಜುವರೆಗೆ.
* ಆರ್.ವಿ. ಟೀಚರ್ಸ್ ಕಾಲೇಜಿನಿಂದ ಅಶೋಕ ಪಿಲ್ಲರ್‌ವರೆಗೆ.
* ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ವರೆಗೆ.

ವಾಹನಗಳ ನಿಲುಗಡೆಗೆ ಅವಕಾಶ ಎಲ್ಲೆಲ್ಲಿ?
* ಮರೀಗೌಡ ರಸ್ತೆ – ಆಲ್ ಅಮೀನ್ ಕಾಲೇಜು ಆವರಣದಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
* ಕೆ.ಎಚ್. ರಸ್ತೆ– ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
* ಮರೀಗೌಡ ರಸ್ತೆ – ಹಾಪ್‌ಕಾಮ್ಸ್‌ನಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಇದೆ.
* ಜೆ.ಸಿ. ರಸ್ತೆ – ಕಾರ್ಪೊರೇಶನ್ ಪಾರ್ಕಿಂಗ್ ಸ್ಥಳಗಳಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಇದೆ.

ಸಮೂಹ ಸಾರಿಗೆ ಬಳಸಲು ಮನವಿ: ಫಲಪುಷ್ಪ ಪ್ರದರ್ಶನದ ಅವಧಿಯಲ್ಲಿ ಮರೀಗೌಡ ರಸ್ತೆ, ಲಾಲ್‌ಬಾಗ್ ರಸ್ತೆ, ಕೆ.ಎಚ್. ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಿರುವ ಸಾಧ್ಯತೆಯಿದೆ. ಸಾರ್ವಜನಿಕರು ಸಾಧ್ಯವಾದಷ್ಟು ಸಮೂಹ ಸಾರಿಗೆಗಳಾದ ಬಿಎಂಟಿಸಿ ಬಸ್, ಮೆಟ್ರೊ ಹಾಗೂ ಕ್ಯಾಬ್ ಬಳಸುವಂತೆ ನಗರ ಸಂಚಾರ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.