ಬೆಂಗಳೂರು: ಮೋಟಾರು ವಾಹನ ಕಾಯ್ದೆಯ ತಿದ್ದುಪಡಿ ಮಸೂದೆ – 2017ನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಾರಿಗೆ ಕ್ಷೇತ್ರದ ವಿವಿಧ ಸಂಘಟನೆಗಳು ನೀಡಿರುವ ಬಂದ್ ಕರೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದಲ್ಲಿ ಬಿಎಂಟಿಸಿ ಬಸ್, ಆಟೊರಿಕ್ಷಾ, ಆ್ಯಪ್ ಆಧರಿತ ಟ್ಯಾಕ್ಸಿ ಸೇವೆ ನಿರಾತಂಕವಾಗಿ ಮುಂದುವರಿದಿತ್ತು. ಖಾಸಗಿ ಬಸ್‌ಗಳೂ ಎಂದಿನಂತೆ ಸಂಚರಿಸಿದವು.

ಸಿಐಟಿಯು ಸಂಘಟನೆ ಪ್ರತಿನಿಧಿಗಳು, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರ ಮಹಾಮಂಡಳ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದವು.

ಪುರಭವನದ ಮುಂದೆ ನಡೆದ ಪ್ರತಿಭಟನೆಯಲ್ಲಿ ಈ ಸಂಘಟನೆಗಳ ಪ್ರತಿನಿಧಿಗಳು, ಆಟೊರಿಕ್ಷಾ ಚಾಲಕರು ಪಾಲ್ಗೊಂಡು ಮಸೂದೆಯ ಲೋಪಗಳನ್ನು ಪ್ರಸ್ತಾಪಿಸಿದರು. ಅಲ್ಲಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆಯಲ್ಲಿ ತೆರಳಿ ಬಹಿರಂಗ ಸಭೆ ನಡೆಸಿದರು.

ಥರ್ಡ್ ಪಾರ್ಟಿ ವಿಮೆ ಮಾಡಿಸುವುದನ್ನು ಕಡ್ಡಾಯಗೊಳಿಸಿರುವುದು, ವಾಹನಗಳ ಪರವಾನಗಿ, ಅಂತರರಾಜ್ಯ ಪರವಾನಗಿ ವಿಷಯದಲ್ಲಿ ಕೇಂದ್ರ ಸರ್ಕಾರವೇ ನಿರ್ಧಾರ ಕೈಗೊಳ್ಳುವುದು, ರಾಜ್ಯ ಸಾರಿಗೆ ನೀತಿ ನಿರೂಪಣೆಯಲ್ಲಿ ಕೇಂದ್ರ ಸರ್ಕಾರವೇ ಪ್ರಧಾನ ಪಾತ್ರ ವಹಿಸುವುದು – ಈ ನಿಯಮಗಳನ್ನು ಕೈಬಿಡಬೇಕು ಎನ್ನುವುದು ಅವರ ಒತ್ತಾಯವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.