ಬೆಂಗಳೂರು: ನಗರದಲ್ಲಿ ರಾಜಕಾಲುವೆಗಳ ಒತ್ತುವರಿಯನ್ನು ನವೆಂಬರ್ 15ರೊಳಗೆ ತೆರವು ಮಾಡಬೇಕು ಎಂದು ಎಲ್ಲ ವಲಯ ಆಯುಕ್ತರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.

ಬೃಹತ್ ಮಳೆನೀರು ಕಾಲುವೆ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ತಹಶೀಲ್ದಾರ್ಗಳು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಈ ಗಡುವು ನೀಡಿದರು.

ತಹಶೀಲ್ದಾರ್ ಅವರು ಎಲ್ಲಾ ಪ್ರಸ್ತಾವನೆಯನ್ನು ಪರಾಮರ್ಶಿಸಿ, ಆದೇಶ ಹೊರಡಿಸಬೇಕು. ಎಲ್ಲಾ ವಲಯ ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳಬೇಕು. ರಾಜಕಾಲುವೆ ಒತ್ತುವರಿ ತೆರವು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಬಿಬಿಎಂಪಿ ವ್ಯಾಪ್ತಿಯ ಎಲ್ಲ ಕೆರೆಗಳ ಸರ್ವೆ ನಡೆಸಬೇಕು. ಸರ್ವೆ ದಾಖಲೆ ಬಂದ ಕೂಡಲೇ ಒತ್ತುವರಿ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್, ಬಿಬಿಎಂಪಿ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ಡಾ.ಹರೀಶ್ ಕುಮಾರ್, ವಿಶೇಷ ಜಿಲ್ಲಾಧಿಕಾರಿ ಎಸ್.ಎಲ್.ಬಾಲಚಂದ್ರನ್, ವಲಯ ಆಯುಕ್ತರಾದ ಕರಿಗೌಡ, ರಮ್ಯಾ, ವಿನೋಥ್ ಪ್ರಿಯಾ, ಸತೀಶ್, ಅರ್ಚನಾ, ಗಿರೀಶ್ ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.

ವಿಲೇವಾರಿ: ‘ದೀಪಾವಳಿ ಹಬ್ಬದಲ್ಲಿ ಉತ್ಪತ್ತಿಯಾಗುವ ಹೆಚ್ಚುವರಿ ಘನತ್ಯಾಜ್ಯವನ್ನು ವಿಲೇವಾರಿ ಮಾಡಲು ಹೆಚ್ಚು ಕಾಂಪ್ಯಾಕ್ಟರ್ಗಳನ್ನು ಬಳಸಿಕೊಳ್ಳಬೇಕು. ತ್ಯಾಜ್ಯ ಬಾಕಿ ಉಳಿಸಬಾರದು’ ಎಂದು ಘನತ್ಯಾಜ್ಯ ವಿಭಾಗದ ಅಧಿಕಾರಿಗಳಿಗೆ ಆದೇಶಿಸಿದರು.

ಕೇಬಲ್ ತೆರವಿಗೆ ಸೂಚನೆ

ಬಿಬಿಎಂಪಿ ವ್ಯಾಪ್ತಿಯ ಟೆಂಡರ್ ಶ್ಯೂರ್ ರಸ್ತೆಗಳ ಮೇಲೆ ಮತ್ತು ಬೆಸ್ಕಾಂ ಕಂಬಗಳಲ್ಲಿ ಹಾಕಿರುವ ಅನಧಿಕೃತ ಓವರ್ ಹೆಡ್ ಕೇಬಲ್ಗಳನ್ನು ಕೂಡಲೇ ತೆರವುಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದರು. ಇನ್ನು ಮುಂದೆ ಹೊಸ ಕೇಬಲ್ ಅಳವಡಿಸಬೇಕಾದರೆ ಡಕ್ಟ್ ಮೂಲಕವೇ ಅಳವಡಿಸಬೇಕು. ಪಾಲಿಕೆಯ ಅನುಮತಿ ಇಲ್ಲದೇ ಯಾವುದೇ ಕೇಬಲ್ ಅಳವಡಿಸಿದರೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಬೆಸ್ಕಾಂ ಕೂಡ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಕಂಬದ ಮೇಲಿನ ಕೇಬಲ್ ಅಳವಡಿಸಬಾರದು ಹಾಗೆಯೇ ನಿಗದಿತ ಅವಧಿಯಲ್ಲಿ ತೆರವುಗೊಳಿಸಬೇಕು. ನಿಗದಿತ ಹಣವನ್ನು ಪಾವತಿ ಮಾಡಿ ಡಕ್ಟ್ನಲ್ಲಿ ಅಳವಡಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.